More

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ

    ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಕಳೆದ ಕೆಲ ದಿನಗಳಿಂದ ವರುಣದೇವ ಕೃಪೆ ತೋರುತ್ತಿದ್ದು, ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಆಗುತ್ತಿರುವ ಮಳೆ ಸಂತಸ ತಂದಿದೆ. ಇದೀಗ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್​ ಘೋಷಿಸಿದೆ.

    ಅದರಂತೆ ಬೆಂಗಳೂರು, ಮೈಸೂರು, ಕೊಡಗು, ಕೋಲಾರ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ ಹಾಗೂ ವಿಜಯನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಉಳಿದಂತೆ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಕೂಡ ಮಳೆ ಮುಂದುವರೆಯಲಿದೆ. ಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts