More

    ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಳ: ತಾಪಮಾನ ಏರಿಕೆಯಾದಂತೆ ಜನರಿಗೆ ಕಾಡಲಿದೆ ಈ ಸಮಸ್ಯೆಗಳು

    ಬೆಂಗಳೂರು: ರಾಜ್ಯದಲ್ಲಿ ಹೀಟ್‌ವೇವ್(ಶಾಖದ ಅಲೆ) ಆತಂಕ ಶುರುವಾಗಿದೆ. ಶನಿವಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 38-39ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾದರೆ, ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಇತ್ತು. ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದಾರೆ.

    ಉತ್ತರದಿಂದ ದಕ್ಷಿಣದತ್ತ ಬಿಸಿ ಗಾಳಿ ಬೀಸುತ್ತಿರುವುದು, ವಾತಾವರಣದಲ್ಲಿ ತೇವಾಂಶ ಇಲ್ಲದಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಧಾನವಾಗಿ ಉಷ್ಣಾಂಶ ಏರಿಕೆಯಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದೆ. ಜನರು ಆರೋಗ್ಯದ ಮೇಲೆ ಹೆಚ್ಚು ಗಮನಹರಿಸಬೇಕು. ತಾಪಮಾನ ಹೆಚ್ಚಾದಂತೆ ಜನರಿಗೆ ಊತ, ತಲೆನೋವು, ವಾಕರಿಕೆ, ನಿರ್ಜಲೀಕರಣ, ಸುಸ್ತು, ವಾಂತಿ ಮತ್ತು ಬೆವರು ಸೇರಿ ಇತರೆ ಆರೋಗ್ಯ ಸಮಸ್ಯೆಗಳು ಕಾಡಲಿವೆ. ಜತೆಗೆ, ಜ್ವರ (102 ಡಿಗ್ರಿ) ಕಾಣಿಸಿಕೊಳ್ಳಬಹುದು. ತೀವ್ರವಾದ ಜ್ವರ (104 ಡಿಗ್ರಿ) ಬಂದರೆ ಪ್ರಜ್ಞೆ ಬೀಳುವ ಅಪಾಯ ಜತೆಗೆ ಕೋಮಾಕ್ಕೂ ಹೋಗಬಹುದು. ಆದ್ದರಿಂದ, ಬಿಸಿಲಿನಲ್ಲಿ ಹೆಚ್ಚು ಓಡಾಡಬಾರದು ಎನ್ನುತ್ತಾರೆ ವೈದ್ಯರು.

    ಇದನ್ನೂ ಓದಿ: ಮಲಮಗನ ಜತೆ ಮದ್ವೆ, 2ನೇ ಮಗುವಿಗೆ ಜನ್ಮ! ಸಾಕಿದ ಪುತ್ರನನ್ನೇ ಮೋಹಿಸಿದ ಬ್ಲಾಗರ್ ಕರಾಳ ಕತೆಯಿದು…​

    ದಕ್ಷಿಣ ಕರ್ನಾಟಕದ ಜಿಲ್ಲೆಗಳಕ್ಕಿಂತ ಪ್ರತಿ ವರ್ಷವೂ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಧಾರವಾಡ, ಕೊಪ್ಪಳ, ಗದಗ, ಬಳ್ಳಾರಿ, ಹಾವೇರಿ, ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು ಉಷ್ಣಾಂಶ ಉಂಟಾಗುತ್ತಿದೆ.ಗರಿಷ್ಠ ತಾಪಮಾನದಲ್ಲಿ 40 ಡಿಗ್ರಿಕ್ಕಿಂತ ಹೆಚ್ಚು ಉಷ್ಣಾಂಶ ದಾಖಲಾದರೆ ಶಾಖ ತರಂಗ ಉಂಟಾಗಲಿದೆ.ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ವಾಡಿಕೆಯಷ್ಟೇ ತಾಪಮಾನ ದಾಖಲಾಗುತ್ತಿದೆ.

    ಇವರು ಎಚ್ಚರವಹಿಸಬೇಕು:
    ಮನೆ ಇಲ್ಲದೆ ಬೀದಿಯಲ್ಲಿ ಮಲಗುವ ನಿರಾಶ್ರಿತರು, ಆಟೋ ಚಾಲಕರು, ಸಂಚಾರ ಪೊಲೀಸರು, ರೈತರು, ಕಟ್ಟಡ ಮತ್ತು ರಸ್ತೆ ನಿರ್ಮಾಣ ಕಾರ್ಮಿಕರು ಬಿರು ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಕೆಲಸ ಮಾಡಬಾರದು. ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಿಸಿಲಿನ ಪ್ರಖರತೆ ಹೆಚ್ಚಿರುತ್ತದೆ. ಇಂಥ ಸಂದರ್ಭದಲ್ಲಿ ಕೆಲಸ ಮಾಡಬಾರದು. ವಿಶೇಷವಾಗಿ ನಿರ್ಮಾಣ ಹಂತದ ಕಾಮಗಾರಿಗಳನ್ನು ನಡೆಸಕೊಡದು. ಬಿಸಿಲು ಲೆಕ್ಕಿಸದೆ ದಿನವಿಡೀ ಕೆಲಸ ಮಾಡಿದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಜತೆಗೆ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ.

    ರಾಜ್ಯದಲ್ಲಿರುವ ಒಟ್ಟು ರೌಡಿಗಳ ಸಂಖ್ಯೆಯನ್ನು ಬಹಿರಂಗಪಡಿಸಿದ ಎಡಿಜಿಪಿ ಅಲೋಕ್​ ಕುಮಾರ್​!

    ಐಪಿಎಲ್ ಕ್ರಿಕೆಟ್ ಪಂದ್ಯಾವಳಿ; ವಾಹನಗಳ ನಿಲುಗಡೆ ನಿಷೇಧ

    ಅತ್ತ ಮಾಡಾಳ್​ಗೆ 14 ದಿನಗಳ ನ್ಯಾಯಾಂಗ ಬಂಧನ; ಇತ್ತ ಬಿಜೆಪಿ ಕೋರ್​ ಕಮಿಟಿ ಸಭೆ, ಭಾರಿ ಚರ್ಚೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts