Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

22 ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಚಿಕಿತ್ಸೆ ಕಿಟ್​, ಕೆಡದ ಆಹಾರ ಸಿದ್ಧಪಡಿಸಿಕೊಳ್ಳಲು ಸೂಚನೆ

Saturday, 08.09.2018, 9:45 AM       No Comments

ನವದೆಹಲಿ: ದೇವರ ನಾಡು ಕೇರಳ ಮತ್ತು ಕರ್ನಾಟಕದ ಕೊಡಗಿನಲ್ಲಿ ಸುರಿದ ಭಾರಿ ಮಳೆಯಿಂದಾಗಿರುವ ಅನಾಹುತವನ್ನು ಸರಿಪಡಿಸಿಕೊಳ್ಳುವುದಕ್ಕೆ ಇನ್ನು ಹೆಣಗುತ್ತಿರುವಾಗಲೇ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ದೇಶಾದ್ಯಂತ 22 ರಾಜ್ಯಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಸಾವು ನೋವುಗಳನ್ನು ತಪ್ಪಿಸಲು ಜನರು ಎಚ್ಚರಿಕೆಯಿಂದಿರುವಂತೆ ತಿಳಿಸಿದೆ.

ಇದಲ್ಲದೆ ಗಂಟೆಗೆ ಸುಮಾರು 25-35 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸುಮಾರು 45 ಕಿ.ಮೀ. ವೇಗದವರೆಗೂ ತಲುಪಲಿದೆ ಎಂದು ಎಚ್ಚರಿಸಿದೆ. ಒಡಿಶಾ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ನಲ್ಲಿ ಶನಿವಾರದವರೆಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಮಧ್ಯಪ್ರದೇಶ, ಛತ್ತೀಸ್‌ ಗಢ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ, ತ್ರಿಪುರ, ಉಪ ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್‌, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ್‌, ಹರ್ಯಾಣ, ಚಂಡೀಗಢ, ದೆಹಲಿ, ಹಿಮಾಚಲ್‌ ಪ್ರದೇಶ, ಪೂರ್ವ ರಾಜಸ್ತಾನ, ಕೊಂಕಣ, ಗೋವಾ, ವಿದರ್ಭ ಮತ್ತು ತೆಲಂಗಾಣಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹೀಗಾಗಿ ಜನರು ಪ್ರಥಮ ಚಿಕಿತ್ಸೆ ಕಿಟ್‌, ಟಾರ್ಚ್‌, ಬಾಟಲ್‌ ಕುಡಿಯುವ ನೀರು, ಕೆಡದ ಆಹಾರ ಪದಾರ್ಥಗಳನ್ನು ಇಟ್ಟುಕೊಳ್ಳುವಂತೆ ಮತ್ತು ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ಮಕ್ಕಳನ್ನು ಆಡಲು ಬಿಡಬೇಡಿ. ಸಾಕು ಪ್ರಾಣಿಗಳ ಕೊರಳ ಪಟ್ಟಿ ಕಟ್ಟದಂತೆ, ಚರಂಡಿ, ಮ್ಯಾನ್‌ಹೋಲ್‌ಗಳಿಂದ ದೂರವಿರುವಂತೆ ಎಚ್ಚರಿಕೆ ನೀಡಿದೆ.

ಮುಂಗಾರಿನ ಭಾರಿ ಮಳೆ, ಪ್ರವಾಹ, ಭೂಕುಸಿತದಿಂದಾಗಿ ಸುಮಾರು 10 ರಾಜ್ಯಗಳಲ್ಲಿ ಇದುವರೆಗೂ 1,400 ಜನರು ಪ್ರಾಣಕಳೆದುಕೊಂಡಿದ್ದಾರೆ. ಅದರಲ್ಲಿ ಕೇರಳವೊಂದರಲ್ಲೇ 488 ಜನ ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top