More

    ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಳಲಿದ್ದ ರಾಜ್ಯದ ಜನತೆಗೆ ಕಳೆದ ಕೆಲ ದಿನಗಳಿಂದ ವರುಣ ತಂಪೆರೆದಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಬಿರುಸಿನ ಗಾಳಿಯೊಂದಿಗೆ ಭಾರೀ ಮಳೆಯಾಗಲಿದ್ದು, ಉತ್ತರ ಕನ್ನಡದ ಬಹುತೇಕ ಸ್ಥಳಗಳಲ್ಲಿ ಮತ್ತು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ ಬಿರುಸಿನ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

    ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

    ಇದನ್ನೂ ಓದಿ: ನೀನೇನು ಹೊಸಬನಲ್ಲ; ಸಂಜು ಸ್ಯಾಮ್ಸನ್​ ಕುರಿತು ಗೌತಮ್​ ಗಂಭೀರ್​ ಹೀಗಂದಿದ್ಯಾಕೆ

    ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿ ವೇಳೆಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts