More

    ದ್ವಿಚಕ್ರ ವಾಹನ ಹೊರತುಪಡಿಸಿ ಹೆಬ್ಬಾಳ ಮೇಲ್ಸೇತುವೆ ಸಂಚಾರ ಬಂದ್

    ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿಯ ಹಿನ್ನೆಲೆಯಲ್ಲಿ ಏ.೧೭ ರಿಂದ (ಬುಧವಾರ) ದ್ವಿಚಕ್ರ ವಾಹನ ಹೊರತುಪಡಿಸಿ ಎಲ್ಲಾ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿಷೇಧಿಸಲಾಗಿದೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿಯನ್ನು ಆರಂಭಿಸಿರುವುದರಿಂದ ಮೇಲ್ಸೇತುವೆಗೆ ಬಿಡಿಎ ಎರಡು ಹೊಸ ಟ್ರ್ಯಾಕ್‌ಗಳನ್ನು ಸೇರಿಸಲಿದೆ. ಈ ಹಿನ್ನೆಲೆಯಲ್ಲಿ ಕೆ.ಆರ್.ಪುರ ಲೂಪ್ ಸೇರುವ ಮುಖ್ಯ ಟ್ರ್ಯಾಕ್ ಬಳಿ ಎರಡು ಸ್ಪ್ಯಾನ್‌ಗಳನ್ನು ಕಿತ್ತು ಹಾಕಲಾಗುತ್ತದೆ. ಹೀಗಾಗಿ ಕೆ.ಆರ್.ಪುರ ಲೂಪ್‌ನಲ್ಲಿ ಮುಂದಿನ ಆರು ತಿಂಗಳ ಕಾಲ ನಗರದ ಕಡೆಗೆ ಸಂಚಾರ ನಿಧಾನವಾಗಲಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಲಾಖೆ ಕೆಲ ಮಾರ್ಗ ಬದಲಾವಣೆ ಮಾಡಿದೆ ಎಂದು ಹೇಳಿದರು.
    ಮಾರ್ಗ ಬದಲಾವಣೆ:
    *ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ವಾಹನಗಳ ಪೈಕಿ ದ್ವಿ-ಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲ ವಾಹನಗಳಿಗೆ ಕೆ.ಆರ್.ಪುರ ಅಪ್-ರ‌್ಯಾಂಪ್‌ನಲ್ಲಿ ನಿಷೇಧಿಸಲಾಗಿದೆ.
    *ನಾಗವಾರ (ಔಟರ್ ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಾಲ್ ಮುಖಾಂತರ ಬರುತ್ತಿದ್ದ ವಾಹನಗಳ ಚಾಲಕರು ಹೆಬ್ಬಾಳ ಸರ್ಕಲ್ನಲ್ಲಿ ಫ್ಲೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೆಹಳ್ಳಿ ಜಂಕ್ಷನ್ ಬಳಿ ‘ಯೂ’ ಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫ್ಲೈಒವರ್‌ನ ರ‌್ಯಾಂಪ್ ಮುಖೇನ ನಗರದ ಕಡೆಗೆ ಚಲಿಸಬಹುದು.
    *ಕೆ.ಆರ್.ಪುರ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳಿಗೆ ಪರ್ಯಾಯ ಮಾರ್ಗಗಳಾದ ಐಒಸಿ-ಮುಕುಂದ ಥೀಯೇಟರ್ ರಸ್ತೆ, ಲಿಂಗರಾಜಪುರ ಮೇಲ್ಸೇತುವೆ ಮಾರ್ಗ,
    ಮತ್ತು ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ ನಗರದೊಳಗೆ ಪ್ರವೇಶಿಸಬೇಕು.
    *ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನ ಸವಾರರು/ಚಾಲಕರು ಜಿಕೆವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.
    *ಕೆ.ಆರ್.ಪುರ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈಓವರ್ ಕೆಳಗಡೆ ನೇರವಾಗಿ ಬಿಇಎಲ್ ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐಐಎಸ್‌ಸಿ ಮುಖಾಂತರ ಚಲಿಸಬಹುದಾಗಿದೆ.
    *ಕೆ.ಆರ್.ಪುರ, ಹೆಣ್ಣೂರು, ಎಚ್.ಆರ್.ಬಿ.ಆರ್ ಲೇಔಟ್, ಕೆಜಿ ಹಳ್ಳಿ, ಬಾಣಸವಾಡಿ ಕಡೆಗಳಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಡೆ ಹೋಗುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯನ್ನು ಬಳಸಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts