More

    63,000 ಕುಟುಂಬಗಳಿಗೆ ಹೆಬ್ಬಾರ ರೇಷನ್ ಕಿಟ್

    ಯಲ್ಲಾಪುರ: ಜನಸೇವೆಗಾಗಿ ನಮ್ಮನ್ನು ಆಯ್ಕೆ ಮಾಡಿ, ಆಶೀರ್ವಾದ ಮಾಡಿದ ಜನರೇ ನಮ್ಮ ಮಾಲೀಕರು. ಕರೊನಾದಿಂದಾಗಿ ಸಂಕಷ್ಟದಲ್ಲಿರುವ ಅವರಿಗೆ ಕೈಲಾದ ನೆರವು ನೀಡುವ ಮೂಲಕ ಅವರ ಜತೆಗೆ ನಾವಿದ್ದೇವೆ ಎಂಬ ಧೈರ್ಯ ನೀಡುವ ಸಲುವಾಗಿ ಹೆಬ್ಬಾರ ರೇಷನ್ ಕಿಟ್ ನೀಡುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
    ಅವರು ತಾಲೂಕಿನ ಕಿರವತ್ತಿ, ಹುಣಶೆಟ್ಟಿಕೊಪ್ಪ, ಚಿಕ್ಕಮಾವಳ್ಳಿ ಇತರೆಡೆಗಳಲ್ಲಿ ಯಲ್ಲಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದ ಕುಟುಂಬಗಳಿಗೆ ಹೆಬ್ಬಾರ ಕುಟುಂಬದಿಂದ ನೀಡಲಾಗುತ್ತಿರುವ ರೇಷನ್ ಕಿಟ್ ವಿತರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಕ್ಷೇತ್ರದ 63,000 ಬಡ ಕುಟುಂಬಗಳಿಗೆ ಕಿಟ್ ನೀಡಲಾಗುತ್ತಿದ್ದು, ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡುತ್ತಾರೆ.
    ಟೋಕನ್ ಹಾಗೂ ಆಪ್ ಮೂಲಕ ವ್ಯವಸ್ಥಿತವಾಗಿ ಬಡವರಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ. ಜನರ ಸಂಕಷ್ಟಕ್ಕೆ ಸ್ಪಂದಿಸುವ, ಜನರ ಆರೋಗ್ಯ ರಕ್ಷಣೆ ಮಾಡುವ ಜವಾಬ್ದಾರಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.
    ಕಿಟ್ ವಿತರಣೆಗೆ ಚಾಲನೆ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಮಾತನಾಡಿ, ಸೇವೆಯೇ ಸಂಘಟನೆ ಎಂಬ ತತ್ವದಡಿ ಕರೊನಾದ ಸಂಕಷ್ಟದ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ ಎಂದರು. ಬಿಜೆಪಿ ವಿಭಾಗೀಯ ಸಹಪ್ರಭಾರಿ ವಿನೋದ ಪ್ರಭು, ಯುವ ಮುಖಂಡ ವಿವೇಕ ಹೆಬ್ಬಾರ, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ಡ ಬರಗದ್ದೆ, ಎಪಿಎಂಸಿ ಉಪಾಧ್ಯಕ್ಷ ರಾಘವೇಂದ್ರ ಗೊಂದಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts