

ಹೆಬ್ರಿ: ಸಾಧಿಸುವ ಮನಸಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಕೇಳಿಸಿಕೊಳ್ಳುವುದು ಮತ್ತು ಆಲಿಸುವುದರ ನಡುವೆ ವ್ಯತ್ಯಾಸವಿದೆ. ವಿದ್ಯಾರ್ಥಿಗಳು ವಿಷಯವನ್ನು ಸ್ಪಷ್ಟವಾಗಿ ಸ್ವೀಕರಿಸಬೇಕು. ಪ್ರಶ್ನೆಗೆ ಉತ್ತರಿಸುವ ಕಲೆ ಕಲಿತಿರಬೇಕು. ಓದುವುದನ್ನು ಒಂದು ಹವ್ಯಾಸವಾಗಿಸಿಕೊಳ್ಳಬೇಕು ಎಂದು ಶಿಕ್ಷಕ ಅಶೋಕ್ ಹೆಸ್ಕುತ್ತೂರ್ ಹೇಳಿದರು.
ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮದಲ್ಲಿ ಸ್ಮರಣ ಶಕ್ತಿಯ ಬಗ್ಗೆ ಉಪನ್ಯಾಸ ನೀಡಿದರು. ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಪಿಆರ್‌ಒ ವಿಜಯ್ ಕುಮಾರ್ ಶೆಟ್ಟಿ, ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಸುಹಾಸ್ ಶೆಟ್ಟಿ ನಿರೂಪಿಸಿ ವಂದಿಸಿದರು.