25.5 C
Bangalore
Monday, December 16, 2019

ಹೆಬ್ರಿ ಟ್ರೀ ಪಾರ್ಕ್ ಸಿದ್ದ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

<<<ಸಾಲುಮರದ ತಿಮ್ಮಕ್ಕನ ಹೆಸರಲ್ಲಿ ಜಿಲ್ಲೆಯ ಎರಡನೇ ಉದ್ಯಾನವನ >>>

- Advertisement -

ಅವಿನ್ ಶೆಟ್ಟಿ ಉಡುಪಿ
ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ಹೆಬ್ರಿಯಲ್ಲಿ ನಿರ್ಮಿಸಲಾದ ವೃಕ್ಷೋದ್ಯಾನ ಉದ್ಘಾಟನೆಗೆ ಸಿದ್ಧವಾಗುತ್ತಿದೆ. ಆಕರ್ಷಕ ಕಲಾಕೃತಿ, ವೈವಿಧ್ಯಮಯ ವೃಕ್ಷರಾಶಿ ಕಣ್ಮನ ಸೆಳೆಯುತ್ತಿದೆ. ಸಾಲುಮರದ ತಿಮ್ಮಕ್ಕನ ಹೆಸರಲ್ಲಿ ಜಿಲ್ಲೆಯ ಎರಡನೇ ಉದ್ಯಾನವನವಾಗಿ ಪಶ್ಚಿಮಘಟ್ಟದ ತಪ್ಪಲಿನ ಹೆಬ್ರಿಯಲ್ಲಿ ನಿರ್ಮಾಣವಾಗುತ್ತಿರುವ ಪಾರ್ಕ್‌ನ ಅಭಿವೃದ್ಧಿ ಕೆಲಸ ಎರಡು ಹಂತಗಳಲ್ಲಿ ಸಂಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಮೊದಲ ಉದ್ಯಾನವನ ಮಣಿಪಾಲದಲ್ಲಿ ನಿರ್ಮಾಣಗೊಂಡಿದ್ದು, ಈಗಾಗಲೆ ಸಾರ್ವಜನಿಕರ ಆಕರ್ಷಣೆ ಕೇಂದ್ರವಾಗಿ ಗುರುತಿಸಿಕೊಂಡಿದೆ.

20 ಎಕರೆ ಜಾಗದಲ್ಲಿ ವೃಕ್ಷೋದ್ಯಾನ: ಪೆರ್ಡೂರು ಮಾರ್ಗವಾಗಿ ಹೆದ್ದಾರಿ ಮೂಲಕ ಹೆಬ್ರಿ ಪೇಟೆಗೆ ಪ್ರವೇಶ ಕಲ್ಪಿಸುವ ಅನತಿ ದೂರದಲ್ಲಿ 20 ಎಕರೆ ವಿಶಾಲ ಜಾಗದಲ್ಲಿ ವೃಕ್ಷೋದ್ಯಾನವನ ನಿರ್ಮಿಸಲಾಗಿದೆ. ಉದ್ಯಾನವನಕ್ಕೆ ಆಕರ್ಷಕ ಪ್ರವೇಶ ದ್ವಾರ ನಿರ್ಮಿಸಲಾಗಿದೆ. ಮರದ ಪ್ರಾರ್ಥನೆ ನಿವೇದಿಸಿದ ಬರಹ ಆಕರ್ಷಣೀಯವಾಗಿದೆ. ಆಸನ ವ್ಯವಸ್ಥೆಗಳನ್ನು ಒಳಗೊಂಡ ತೆರೆದ ರಂಗಮಂದಿರ, ಮಾತುಕತೆಯ ಕಟ್ಟೆ ವಿಶೇಷವಾಗಿ ನಿರ್ಮಾಣವಾಗಿದೆ. ಉದ್ಯಾನವನದಲ್ಲಿ ಕುಳಿತುಕೊಳ್ಳುವ ಆಸನ ವ್ಯವಸ್ಥೆ, 1600 ಮೀಟರ್ ವಾಕಿಂಗ್ ಟ್ರ್ಯಾಕ್, ಮಕ್ಕಳು ಆಟವಾಡುವ ಅಂಗಳ, ಶೌಚಗೃಹ, ಕುಡಿಯುವ ನೀರು ಸೇರಿದಂತೆ ಮೂಲವ್ಯವಸ್ಥೆಗಳನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ.

ಸದ್ಯಕ್ಕಿಲ್ಲ ಉದ್ಘಾಟನೆ ಭಾಗ್ಯವಿಲ್ಲ: ವೃಕ್ಷೋದ್ಯಾನದ ಕೆಲಸಗಳು ಪೂರ್ಣಗೊಂಡಿದ್ದರೂ ಈಗಲೇ ಉದ್ಘಾಟನೆ ಭಾಗ್ಯವಿಲ್ಲ. ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಹೊಸ ಯೋಜನೆ ಉದ್ಘಾಟನೆ ಮಾಡುವಂತಿಲ್ಲ. ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಪಾರ್ಕ್ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ವೃಕ್ಷೋದ್ಯಾನವನ ಅಭಿವೃದ್ಧಿಗಾಗಿ ಅರಣ್ಯ ಇಲಾಖೆ, ಗ್ರಾಮ ಅರಣ್ಯ ಸಮಿತಿ ಪಾರ್ಕ್‌ನ ಅಭಿವೃದ್ಧಿಗಾಗಿ ಶ್ರಮಿಸಿದ್ದು, ಮುಂಬರುವ ದಿನಗಳಲ್ಲಿ ಪಾರ್ಕ್‌ನ ಸಮಗ್ರ ಜವಾಬ್ದಾರಿ ಗ್ರಾಮ ಅರಣ್ಯ ಸಮಿತಿ, ಅರಣ್ಯ ಇಲಾಖೆ ನಿರ್ವಹಿಸಬೇಕಿದೆ.

ಒಂದು ಕೋಟಿ ರೂ. ವೆಚ್ಚ: ಹೆಬ್ರಿ ಗ್ರಾಮ ಪಂಚಾಯಿತಿ ವತಿಯಿಂದ 2009ರಲ್ಲಿ ಉದ್ಯಾನವನ ನಿರ್ಮಿಸಲು 1.50 ಲಕ್ಷ ರೂ. ವೆಚ್ಚ ಮಾಡಲಾಗಿತ್ತು. ಅನಂತರ ಹೆಬ್ರಿ ಗ್ರಾಮ ಅರಣ್ಯ ಸಮಿತಿ ವತಿಯಿಂದ ಉದ್ಯಾನವನ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಸಾಲುಮರದ ತಿಮ್ಮಕ್ಕ ಹೆಸರಲ್ಲಿ ವೃಕ್ಷೋದ್ಯಾನ ನಿರ್ಮಾಣಕ್ಕೆ ಅನುದಾನ ನೀಡಿದ್ದು, ಒಂದು ಕೋಟಿ ರೂ. ವೆಚ್ಚದಲ್ಲಿ ಪಾರ್ಕ್ ನಿರ್ಮಾಣಗೊಳ್ಳುತ್ತಿದೆ. 60 ಲಕ್ಷ ರೂ. ವೆಚ್ಚದಲ್ಲಿ ಮೊದಲ ಹಂತದಲ್ಲಿ ಅಭಿವೃದ್ಧಿ ಕೆಲಸಗಳು ನಡೆದು 68 ಲಕ್ಷ ರೂ. ವೆಚ್ಚದಲ್ಲಿ ಎರಡನೇ ಹಂತದ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದೆ.

ಗಮನ ಸೆಳೆಯುವ ಕಲಾಕೃತಿ, ಔಷಧವನ: ಪ್ರಕೃತಿ ಉಳಿಸುವ ಸಂದೇಶ ಸಾರುವ ಕಲಾಕೃತಿಗಳು, ಔಷಧೀಯ ವನದ ಸಸ್ಯರಾಶಿಗಳು ಗಮನ ಸೆಳೆಯುತ್ತಿವೆ. ನೀರಿನ ಕಾರಂಜಿ, ಹೂದೋಟ, ಮುಳಿಹುಲ್ಲಿನ ವಿಶ್ರಾಂತಿ ಚಪ್ಪರ ಮೊದಲಾದವುಗಳು ಮನತಣಿಸಲಿವೆ. ಹಾಡಿಯಲ್ಲಿ ಮರಗಳ ನಡುವೆ ಜೋಕಾಲಿ, ತುಳುನಾಡಿನ ಸಾಂಪ್ರದಾಯಿಕ ಎತ್ತಿನಗಾಡಿ, ಯಕ್ಷಗಾನ, ಭೂತದ ಕೋಲ, ಕಂಬಳ, ಅಪೂರ್ವ ಪ್ರಾಣಿಗಳ ಕಲಾಕೃತಿ ಆಕರ್ಷಣೀಯವಾಗಿವೆ. ಪಕ್ಷಿ ಪ್ರಿಯರಿಗೆ 1500 ಮೀಟರ್ ದೂರದ ಪ್ರಕೃತಿ ಪಥ, ಹಲಸು ವೃಕ್ಷಗಳ ತೋಪು, ಚೆಕ್ ಡ್ಯಾಂ ಮಾದರಿ ವೈಶಿಷ್ಟೃಪೂರ್ಣವಾಗಿದೆ. ಲಾವಂಚ, ಅಮೃತಬಳ್ಳಿ, ಈಶ್ವರ ಬೇರು, ಗರುಡ ಪಾತಾಳ, ತುಳಸಿ, ಕಾಡುಮಲ್ಲಿಗೆ, ಒಂದೆಲಗ (ಬ್ರಾಹ್ಮಿ) ಮಜ್ಜಿಗೆ ಸೊಪ್ಪು, ದೊಡ್ಡ ಪತ್ರೆ, ಹಸಿರು ಕಿರಾತಕಡ್ಡಿ ವಿವಿಧ ಬಗೆಯ ಔಷಧೀಯ ಗಿಡಗಳನ್ನು ಔಷಧವನದಲ್ಲಿ ಬೆಳೆಸಿರುವುದು ವಿಶೇಷ.

ಹೆಬ್ರಿಯಲ್ಲಿ ಸಾಲುಮರದ ತಿಮ್ಮಕ್ಕ ಪಾರ್ಕ್ ಸುಂದರ, ಸುಸಜ್ಜಿತವಾಗಿ ನಿರ್ಮಾಣಗೊಂಡಿದೆ. ಪ್ರಕೃತಿ, ಅರಣ್ಯ ಅಗತ್ಯ ಬಗ್ಗೆ ವೃಕ್ಷೋದ್ಯಾನವನ ಉತ್ತಮ ಸಂದೇಶ ನೀಡಲಿದೆ. ವಾಕಿಂಗ್ ಟ್ರಾೃಕ್, ಮಕ್ಕಳ ಆಟದ ಅಂಗಳ ಸೇರಿದಂತೆ ಎಲ್ಲ ಮೂಲವ್ಯವಸ್ಥೆಗಳನ್ನೂ ವ್ಯವಸ್ಥಿತವಾಗಿ ಮಾಡಲಾಗಿದೆ. ಪಾರ್ಕ್‌ನ ಎಲ್ಲ್ಲ ಕೆಲಸ ಪೂರ್ಣಗೊಂಡಿದ್ದು, ಮೇ 23ರ ಬಳಿಕ ಉದ್ಘಾಟನೆಗೊಳ್ಳಲಿದೆ.
-ಎಸ್.ಪ್ರಭಾಕರನ್, ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಲಯ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...