ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಘೋಟವಾಡೆ ಎಂಬಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: ನಕ್ಸಲರ ನಿರ್ಮೂಲನೆಗೆ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಹೈವೋಲ್ಟೆಜ್ ಮೀಟಿಂಗ್
AW 139 ಹೆಲಿಕಾಪ್ಟರ್ ಮುಂಬೈನ ಜುಹುದಿಂದ ಹೈದರಾಬಾದ್ಗೆ ಹೊರಟಿತ್ತು. ಹೆಲಿಕಾಪ್ಟರ್ನಲ್ಲಿ ಕ್ಯಾಪ್ಟನ್ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು. ಅದೃಷ್ವವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಬಲವಾಗಿ ಬೀಸುತ್ತಿದ್ದ ಗಾಳಿ ಹಾಗೂ ಹವಾಮಾನ ಬದಲಾವಣೆಯಿಂದಾಗಿ ಈ ಅವಘಡ ನಡೆದಿದೆ ಎನ್ನಲಾಗಿದೆ. ಆದರೆ ಅಪಘಾತಕ್ಕೆ ನಿಖರವಾದ ತಾಂತ್ರಿಕ ಕಾರಣ ಏನು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ.
ಹವಾಮಾನ ವೈಪರೀತ್ಯದಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಇದು ಯಾರ ಹೆಲಿಕಾಪ್ಟರ್ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಘಟನೆಯ ಸುದ್ದಿ ತಿಳಿದ ತಕ್ಷಣ ಆ ಪ್ರದೇಶದಲ್ಲಿ ಜನಸಾಗರವೆ ನೆರದಿತ್ತು. ಹೆಲಿಕಾಪ್ಟರ್ ಭೂಮಿಗೆ ಅಪ್ಪಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. (ಏಜೆನ್ಸೀಸ್)
ಬದ್ಲಾಪುರ ಲೈಂಗಿಕ ದೌರ್ಜನ್ಯ ಕೇಸ್; ಬಂದ್ ಬದಲಿಗೆ ಕಪ್ಪು ಪಟ್ಟಿ ಧರಿಸಿ ಎಂವಿಎ ನಾಯಕರು ಪ್ರೊಟೆಸ್ಟ್