More

    ಬಾದಾಮಿ ಜನರಿಂದ ಸಿದ್ದರಾಮಯ್ಯಗೆ ಹೆಲಿಕಾಪ್ಟರ್ ಗಿಫ್ಟ್! ದುಡ್ಡು ಹೊಂದಿಸಲು ತಾಲೂಕಿನ ಜನ ಚಂದ ವಸೂಲಿ ಮಾಡುತ್ತಿದ್ದಾರೆ ಎಂದ ಜಮೀರ್ ಅಹ್ಮದ್

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮಲ್ಲೇ ಮುಂದಿನ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಬಾದಾಮಿ ಕ್ಷೇತ್ರದ ಜನರು ಒತ್ತಾಯ ಮಾಡುತ್ತಿದ್ದಾರೆ. 60 ವರ್ಷದಲ್ಲಿ ಆಗದ ಅಭಿವೃದ್ಧಿ ಕೆಲಸಗಳು ಕಳೆದ 5 ವರ್ಷದಲ್ಲಿ ಬಾದಾಮಿಯಲ್ಲಿ ಆಗಿದೆ. ಶಾಸಕನಾದವನು 15 ದಿನಕ್ಕೊಮ್ಮೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಲು ಬಂದು ಹೋಗುತ್ತಿರಬೇಕಾಗುತ್ತದೆ. ಈ ನಡುವೆ ಸಿದ್ದರಾಮಯ್ಯ ನನಗೆ ಕ್ಷೇತ್ರಕ್ಕೆ ಬರಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಇಲ್ಲಿನ ಜನರು ಸಿದ್ದರಾಮಯ್ಯ ಅವರಿಗೆ ಹೆಲಿಕಾಪ್ಟರ್ ಗಿಫ್ಟ್​​ ನೀಡಲು ಮುಂದಾಗಿದ್ದಾರೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

    ಬಾದಾಮಿಗೆ ಬರಲು ಆಗುವುದಿಲ್ಲ ಎಂದು ಹೇಳಿರುವುದರಿಂದ ಸಿದ್ದರಾಮಯ್ಯ ಅವರಿಗೆ ಜನರೇ ಹೆಲಿಕಾಪ್ಟರ್ ಕೊಡಿಸಲು ತೀರ್ಮಾನ ಮಾಡಿದ್ದಾರೆ. ಇದಕ್ಕಾಗಿ 25 ಕೋಟಿ ರೂ. ಖರ್ಚಾಗಲಿದ್ದ, ಜನರೇ ದುಡ್ಡು ಹಾಕಿ ಹೆಲಿಕಾಪ್ಟರ್ ಕೊಡಿಸಬೇಕೆಂದ ನಿರ್ಧಾರ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಬಾದಾಮಿ ತಾಲೂಕಿನ ಜನ ಚಂದ ವಸೂಲಿ ಮಾಡುತ್ತಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಮಾತನಾಡುತ್ತಾ, 224 ಕ್ಷೇತ್ರದಿಂದಲೂ ಸ್ಪರ್ಧಿಸಲು ಸಿದ್ದರಾಮಯ್ಯ ಅವರಿಗೆ ಒತ್ತಡವಿದೆ. ನಾನು ಸಹ ಚಾಮರಾಜಪೇಟೆಗೆ ಬನ್ನಿ ಅಂತ ಹೇಳುತ್ತಿದ್ದೇನೆ. ಅವರು ಇನ್ನೂ ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದರ ಬಗ್ಗೆ ಸಿದ್ಧತೆ ನಡೆಸಿಲ್ಲ. ಬಾದಾಮಿಯಲ್ಲಿ ನಾನು ಕೂಡಾ ಪ್ರವಾಸ ಮಾಡಿ ಜನರ ಜತೆ ಮಾತನಾಡಿದ್ದೇನೆ. ಅಲ್ಲಿ ದಾರಿಯುದ್ದಕ್ಕೂ ಜನರು ಸಿದ್ದರಾಮಯ್ಯ ಅವರೇ ಬರಬೇಕು ಎನ್ನುತ್ತಿದ್ದಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts