More

  ಜಾಥಾ ಮೂಲಕ ಸಂಚಾರ ಜಾಗೃತಿ

  ಮದ್ದೂರು: ಪಟ್ಟಣದ ವ್ಯಾಪ್ತಿಯಲ್ಲಿ ಕಾನೂನು ಮತ್ತು ಶಿಸ್ತು ವಿಭಾಗ ಮತ್ತು ಸಂಚಾರ ಠಾಣೆ ಪೊಲೀಸರು ಜಂಟಿಯಾಗಿ ಶುಕ್ರವಾರ ಹೆಲ್ಮೆಟ್ ಜಾಗೃತಿ ಜಾಥಾ ನಡೆಸಿ ವಾಹನ ಸವಾರರಿಗೆ ಅರಿವು ಮೂಡಿಸಿದರು.

  ಪಿಎಸ್‌ಐ ಮಂಜುನಾಥ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ವಾಹನ ಚಾಲನೆ ಮಾಡುವಾಗ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ಅಪಘಾತವಾದ ಸಂದರ್ಭದಲ್ಲಿ ಬೈಕ್ ಸವಾರರು ಹೆಲ್ಮೆಟ್ ಹಾಕಿದ್ದರೆ ಪ್ರಾಣಾಪಾಯದಿಂದ ಪಾರಾಗಬಹುದು ಎಂಬುವುದನ್ನು ಪ್ರತಿಯೊಬ್ಬರೂ ಮನಗಾಣಬೇಕು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿದರೆ ಅಪಘಾತಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
  ಬೆಂಗಳೂರು-ಮೈಸೂರು ಹೆದ್ದಾರಿ ಹಾಗೂ ಪಟ್ಟಣದ ಪೇಟೆಬೀದಿಯಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಕಟ್ಟುನಿಟ್ಟಿನ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದು, ವಾಹನ ಸವಾರರು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು. ಆಗ ಮಾತ್ರ ಅಪಘಾತಗಳನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದರು.

  ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ಪೇಟೆ ಬೀದಿ ಮೂಲಕ ಕೊಲ್ಲಿ ವೃತ್ತದ ವರೆಗೆ ಮದ್ದೂರು ಪೊಲೀಸ್ ಠಾಣೆ ಹಾಗೂ ಸಂಚಾರ ಪೊಲೀಸ್ ಠಾಣೆ ಪೊಲೀಸರು ಜಾಗೃತಿ ಜಾಥಾ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
  ಸಂಚಾರ ಪೊಲೀಸ್ ಠಾಣೆ ಮಹೇಶ್ ಹಾಗೂ ಸಿಬ್ಬಂದಿ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts