More

    ಅಂಗವಿಕಲರ ನೆರವಿಗೆ ಜಿಲ್ಲಾಡಳಿತ ಸ್ಪಂದನೆ

    ಮಂಗಳೂರು: ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಪೂರಕ ಯೋಜನೆಗಳ ಅನುಷ್ಠಾನ ಮತ್ತು ಅಂಗವಿಕಲರ ನೆರವಿಗೆ ಜಿಲ್ಲಾಡಳಿತ ಸದಾ ಸ್ಪಂದಿಸಲಿದೆ ಎಂದು ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ.ಭರವಸೆ ನೀಡಿದ್ದಾರೆ.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿಶ್ವ ಅಂಗವಿಕಲರ ದಿನಾಚರಣೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
    ಕೋವಿಡ್ 19 ಕಾರಣ ಅಂಗವಿಲರು ಹೆಚ್ಚು ತೊಂದರೆಗೆ ಒಳಗಾಗಿದ್ದಾರೆ. ಮಾನಸಿಕವಾಗಿಯೂ ಆಘಾತಕ್ಕೆ ಒಳಗಾಗಿದ್ದಾರೆ. ಆಗಿರುವ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲಾಡಳಿತ ಅಂಗವಿಕಲರ ಬೆಂಬಲಕ್ಕೆ ನಿಲ್ಲಲಿದೆ ಎಂದರು.
    ಚೈತನ್ಯ ವಿಕಲಚೇತನರ ಸಂಘದ ಅಧ್ಯಕ್ಷ ಮುರಳೀಧರ್ ಕಾಮತ್ ಮಾತನಾಡಿ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅಂಗವಿಕಲರಿಗೆ ಈಗ ಸಾಕಷ್ಟು ಸೌಲಭ್ಯಗಳು ಇವೆ. ಆದರೆ ಅನುಷ್ಠಾನದಲ್ಲಿ ಕೆಲವೊಂದು ಲೋಪಗಳು ಆಗುತ್ತಿವೆ. ಇದನ್ನು ಜಿಲ್ಲಾಡಳಿತ ಸರಿಪಡಿಸಬೇಕಾಗಿದೆ. ರಾಜ್ಯದಲ್ಲಿ ಸುಮಾರು 35 ಲಕ್ಷ ಮಂದಿ ಅಂಗವಿಕಲರು ಇದ್ದಾರೆ. ಆದರೆ ಅವರಲ್ಲಿ ಕೇವಲ 8.50 ಲಕ್ಷ ರೂ. ಮಂದಿಗೆ ಮಾತ್ರ ಸೌಲಭ್ಯ ಸಿಗುತ್ತಿದೆ ಎಂದು ತಿಳಿಸಿದರು.

    ಅಂಗವಿಕಲರಿಗೆ ಸಿಗಬೇಕಾಗಿರುವ ಸೌಲಭ್ಯ ಸಮರ್ಪಕವಾಗಿ ಬಳಕೆ ಆಗಬೇಕಾದರೆ ಜಿಲ್ಲಾಡಳಿತದಿಂದ ಪ್ರತಿ ತಿಂಗಳು ಕುಂದು ಕೊರತೆ ಸಭೆ ನಡೆಸಬೇಕು. ಸಭೆಯಲ್ಲಿ ಸೌಲಭ್ಯ ವಿತರಣೆಯಲ್ಲಿ ಆಗುತ್ತಿರುವ ಲೋಪಗಳ ಬಗ್ಗೆ ಚರ್ಚೆ ಆಗಬೇಕು ಎಂದು ಆಗ್ರಹಿಸಿದರು.
    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪಾಪ ಬೋವಿ, ದಕ್ಷಿಣ ಕನ್ನಡ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಶೀಲಾವತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ವೆನ್ಲಾಕ್ ಆಸ್ಪತ್ರೆ ವೈದ್ಯಾಧಿಕಾರಿ ಡಾ.ನವೀನ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts