More

    ಮತದಾನ ಸುಸೂತ್ರವಾಗಿ ನಡೆಯಲು ಸಹಕರಿಸಿ

    ಬಾಗಲಕೋಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಆಯಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಾಪಿಸಲಾದ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡ ಎರಡನೇ ಹಂತದ ತರಬೇತಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹಾಗೂ ಜಿ.ಪಂ ಸಿಇಒ ಶಶೀಧರ ಕುರೇರ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ಹುನಗುಂದ ಮತಕ್ಷೇತ್ರದ ವಿಜಯ ಮಹಾಂತೇಶ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ ಅವರು ಮುಧೋಳ ಮತಕ್ಷೇತ್ರದ ಮುಧೋಳ ಎಸ್.ಆರ್. ಕಂಠಿ ಕಾಲೇಜಿನಲ್ಲಿ ಸ್ಥಾಪಿಸಲಾದ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಭೇಟಿ ಸಮಯದಲ್ಲಿ ಮತಗಟ್ಟೆ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳ ಹಾಜರಾತಿಯನ್ನು ಪರಿಶೀಲಿಸಿದರು. ಪ್ರತಿಯೊಂದು ತರಬೇತಿ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಜಾನಕಿ ಕೆ.ಎಂ ಅವರು ಯಾವುದೇ ಅಡೆತಡೆ ಇಲ್ಲದೇ ಮತದಾನ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಎರಡನೇ ಹಂತದ ತರಬೇತಿ ನೀಡಲಾಗುತ್ತಿದ್ದು, ತಾವುಗಳು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಸಂಪೂರ್ಣ ತರಬೇತಿ ಪಡೆದು ಸಹಕರಿಸಲು ಸೂಚನೆ ನೀಡಿದರು.

    ಜಿಲ್ಲೆಯಲ್ಲಿರುವ ಏಳು ಮತಕ್ಷೇತ್ರ ವ್ಯಾಪ್ತಿಯಲ್ಲಿ ತರಬೇತಿ ಹಮ್ಮಿಕೊಂಡಿದ್ದು, 2418 ಮತಗಟ್ಟೆ ಅಧಿಕಾರಿಗಳು, 2418 ಸಹಾಯಕ ಮತಗಟ್ಟೆ ಅಧಿಕಾರಿಗಳು ಸೇರಿ ಒಟ್ಟು 4836 ಜನ ಅಧಿಕಾರಿಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಮುಧೋಳ ಮತಕ್ಷೇತ್ರದಲ್ಲಿ 528, ತೇರದಾಳ ಮತಕ್ಷೇತ್ರದಲ್ಲಿ 439, ಜಮಖಂಡಿ ಮತಕ್ಷೇತ್ರದಲ್ಲಿ 632, ಬೀಳಗಿ ಮತಕ್ಷೇತ್ರದಲ್ಲಿ 673, ಬಾದಾಮಿ ಮತಕ್ಷೇತ್ರದಲ್ಲಿ 813, ಬಾಗಲಕೋಟೆ ಮತಕ್ಷೇತ್ರದಲ್ಲಿ 1132 ಹಾಗೂ ಹುನಗುಂದ ಮತಕ್ಷೇತ್ರದಲ್ಲಿ 619 ಜನರಿಗೆ ತರಬೇತಿ ಹಮ್ಮಿಕೊಳ್ಳಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts