ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಅರಿವು ಮೂಡಿಸಲು ಸಹಕಾರಿ

hbr-1
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಶಾಂತಿನಿಕೇತನದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಮೂಡಿಸಲು ನಡೆಸಿರುವ ರಸಪ್ರಶ್ನೆ ಕಾರ್ಯಕ್ರಮ ವಿದ್ಯಾರ್ಥಿಗಳ ಭವ್ಯ ಭವಿಷ್ಯಕ್ಕೆ ನಾಂದಿ ಹಾಡಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಈ ಕಾರ್ಯಕ್ರಮ ಪ್ರೇರಣೆ ನೀಡಿದೆ ಎಂದು ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಹೇಳಿದರು.

ಕುಚ್ಚೂರು ಕುಡಿಬೈಲ್ ಶಾಂತಿನಿಕೇತನ ಯುವವೃಂದ, ಶಾಂತಿನಿಕೇತನ ಸೌಹಾರ್ದ ಸಹಕಾರಿ ಸಂಘ ಹಾಗೂ ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಸಹಯೋಗದಲ್ಲಿ ನಡೆದ 29ನೇ ಜ್ಞಾನಸ್ಫೂರ್ತಿ ರಸಪ್ರಶ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಂತಿನಿಕೇತನದ ಸಂಸ್ಥಾಪಕ ರಾಜೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧೆ ನಡೆಸಿ, ಸ್ಪರ್ಧಾತ್ಮಕ ಪರೀಕ್ಷೆಗೆ ದೊಡ್ಡ ಮೊತ್ತದ ನಗದು ಬಹುಮಾನ ನೀಡುತ್ತಿದ್ದೇವೆ ಎಂದರು.

ಕುಂಬಾರರ ಗುಡಿ ಕೈಗಾರಿಕೆ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲ್ ನಗದು ಬಹುಮಾನ ನೀಡಿ ಸಹಕರಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ಲಿತಿನ್, ದೈಹಿಕ ಶಿಕ್ಷಣ ನಿರ್ದೇಶಕ ರಫೀಕ್, ಶಾಂತಿನಿಕೇತನ ಆಡಳಿತ ಮಂಡಳಿ ಸದಸ್ಯರಾದ ನರೇಂದ್ರ ಎಸ್.ಮರಸಣಿಗೆ, ನಿತಿನ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವರ್ಷಾ, ಸುಪ್ರಿಯಾ, ಸುಶ್ಮಿತಾ, ಪ್ರಮೋದ್ ಪ್ರಥಮ, ಶಬರೀಶ್ ವಿಕಾಸ್, ಶರತ್, ಧನ್ಯಾ ದ್ವೀತಿಯ ಬಹುಮಾನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net