

ಕಡಬ: ಮಕ್ಕಳಲ್ಲಿ ಜ್ಞಾನಾರ್ಜನೆ ವೃದ್ಧಿಸಲು ಕಲಿಕಾ ಹಬ್ಬ ಹೆಚ್ಚು ಸಹಕಾರಿಯಾಗಿದ್ದು, ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಹಲವು ವಿಭಿನ್ನ ಕಾರ್ಯಕ್ರಮ ಇಲಾಖೆ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಬೆಳಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ, ಸ.ಹಿ.ಪ್ರಾ.ಶಾಲೆ ಬೆಳಂದೂರು ಆಶ್ರಯದಲ್ಲಿ, ಬೆಳಂದೂರು ಸ.ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಬಲವರ್ಧನೆ ವರ್ಷ ಸವಣೂರು ಕ್ಲಸ್ಟರ್ಮಟ್ಟದ ಮಕ್ಕಳ ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿದರು.
ಬೆಳಂದೂರು ಎಸ್ಡಿಎಂಸಿ ಅಧ್ಯಕ್ಷ ಭವಾನಿಶಂಕರ್ ಅಗಳಿ ಅಧ್ಯಕ್ಷತೆ ವಹಿಸಿದ್ದರು. ಬೆಳಂದೂರು ಗ್ರಾ.ಪಂ. ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯೆ ಹರಿಣಾಕ್ಷಿ ಬನಾರಿ, ಬೆಳಂದೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ನಾರಾಯಣ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಿಂಗರಾಜು ಕೆ, ಕಾಣಿಯೂರು ಕ್ಲಸ್ಟರ್ ಸಿಆರ್ಪಿ ಯಶೋದಾ ಎ, ಕುದ್ಮಾರು ಸ.ಉ.ಹಿ. ಪ್ರಾ. ಶಾಲೆಯ ಮುಖ್ಯಶಿಕ್ಷಕ ಕುಶಾಲಪ್ಪ, ಬೊಬ್ಬೆಕೇರಿ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಶಶಿಕಲಾ ಮೊದಲಾದವರು ಉಪಸ್ಥಿತರಿದ್ದರು.
ಸವಣೂರು ಕ್ಲಸ್ಟರ್ ಸಿಆರ್ಪಿ ಜಯಂತ್ ವೈ. ಪ್ರಾಸ್ತಾವಿಸಿದರು. ಮುಖ್ಯಶಿಕ್ಷಕ ಜಾನಕಿ ಸ್ವಾಗತಿಸಿದರು. ಶಿಕ್ಷಕ ಲೋಕೇಶ್ ವಂದಿಸಿದರು. ಶಿಕ್ಷಕಿ ಜಯಪ್ರಭಾ ಕಾರ್ಯಕ್ರಮ ನಿರೂಪಿಸಿದರು.