ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರು, ಮೇವಿನ ಸಮಸ್ಯೆ ಹಾಗೂ ಉದ್ಯೋಗ ಸೃಜನೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಸಹಾಯವಾಣಿ ಕೇಂದ್ರ (ದೂರವಾಣಿ ಸಂಖ್ಯೆ 0836 2352045) ಆರಂಭಿಸಿದೆ.
ಈ ಕೇಂದ್ರ ವಾರದ ಎಲ್ಲ ದಿನಗಳ 24 ತಾಸು ಕಾರ್ಯನಿರ್ವಹಿಸಲಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.