

ಆರೋಗ್ಯಕರವಾಗಿರಲು ನಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆಯನ್ನು ತಪ್ಪಿಸುವುದು ಬಹಳ ಮುಖ್ಯ. ಹಿಮೋಗ್ಲೋಬಿನ್ ಒಂದು ಪ್ರೋಟೀನ್. ಇದು ದೇಹದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ತಲುಪಿಸುವ ಕೆಲಸ ಮಾಡುತ್ತದೆ. ವ್ಯಕ್ತಿಯ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವು ಕಡಿಮೆಯಾಗಲು ಪ್ರಾರಂಭಿಸಿದರೆ ಅದು ರಕ್ತಹೀನತೆ ಜತೆಗೆ ಅನೇಕ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು. ಆದ್ದರಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಿದ್ದರೆ ಅದರಿಂದ ಸಾಧ್ಯವಾದಷ್ಟು ಬೇಗ ಚೇತರಿಸಿಕೊಳ್ಳಬೇಕು. ದೇಹದಲ್ಲಿನ ಹಿಮೋಗ್ಲೋಬಿನ್ ಕೊರತೆಯನ್ನು ಹೋಗಲಾಡಿಸಿ ಆರೋಗ್ಯವಾಗಿಡಬಲ್ಲ ಮನೆಯಲ್ಲೇ ಮಾಡಬಹುದಾದ ಜ್ಯೂಸ್ಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ.