More

  ಪ್ರವೀಣ್​ ನೆಟ್ಟಾರು ಪತ್ನಿಯ ಉದ್ಯೋಗ ವಿಚಾರ: ಸಿಎಂ ಅವರಿಂದ ಮಹತ್ವದ ನಿರ್ಣಯ

  ಬೆಂಗಳೂರು: ಹತ್ಯೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರನ್ನು ನೂತನ ಸರ್ಕಾರ ಕೆಲಸದಿಂದ ವಜಾಗೊಳಿಸಿದ್ದ ವಿಚಾರ ವಿವಾದಾತ್ಮಕವಾಗಿ ಪರಿಣಮಿಸಿದೆ. ಇದರ ಬೆನ್ನಿಗೇ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

  ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನೂತನಕುಮಾರಿ ಅವರನ್ನು ಕೆಲಸದಿಂದ ವಜಾಗೊಳಿಸಿದ್ದ ವಿಚಾರವಾಗಿ ಬಿಜೆಪಿಯ ನಾಯಕರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಮಾತ್ರವಲ್ಲ, ಇದು ದ್ವೇಷದ ರಾಜಕಾರಣ ಎಂದು ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

  ಇದನ್ನೂ ಓದಿ: ಕಾಡಾನೆ ತುಳಿತಕ್ಕೆ ಮಹಿಳೆ ಬಲಿ; ಯಾರಿಗೂ ಗೊತ್ತಾಗದಂತೆ ಶವ ಕೊಂಡೊಯ್ಯಲು ಅಧಿಕಾರಿಗಳ ತಾಕೀತು?

  ‘ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ.

  ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

  ಕುಸ್ತಿಪಟುಗಳ ಪರ ದನಿ ಎತ್ತಿದ ಬಾಬಾ ರಾಮದೇವ್; ಬ್ರಿಜ್​​ಭೂಷಣ್​ ಶರಣ್ ಸಿಂಗ್ ಬಂಧನಕ್ಕೆ ಆಗ್ರಹ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts