ಹವಾಮಾನ ಮುನ್ಸೂಚನೆ: ಮುಂದಿನ 5 ದಿನ ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

Rain (1)
Published on

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್ ಮತ್ತು ವಿಜಯಪುರದಲ್ಲಿ ಏ.16ರಿಂದ ಏ.20ರವರೆಗೆ, ಧಾರವಾಡ ಮತ್ತು ಕಲಬುರಗಿಯಲ್ಲಿ ಮುಂದಿನ 24 ಗಂಟೆ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಒಂದೆರೆಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಕಾಣಿಸಿಕೊಳ್ಳಲಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಒಣ ಹವೆ ಮುಂದುವರಿಯಲಿದ್ದು, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಏ.18ರಿಂದ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕಲವೆಡೆ ವಾಡಿಕೆಗಿಂತ ಸರಾಸರಿ ಎರಡು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗಲಿದೆ. ಶನಿವಾರ ಕಲಬುರಗಿ 40.9, ರಾಯಚೂರು 40, ಬಳ್ಳಾರಿಯಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net