More

    ಭಾರತ ಶೈಕ್ಷಣಿಕವಾಗಿ ಪ್ರಜ್ವಲಿಸಲಿ

    ಹಿರಿಯೂರು: ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಭವಿಷ್ಯದಲ್ಲಿ ಭಾರತ ಶೈಕ್ಷಣಿಕವಾಗಿ ಪ್ರಜ್ವಲಿಸುವಂತೆ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ ಟಿ.ಎಂ.ಕುಮಾರ್ ಹೇಳಿದರು.

    ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರದ ಬಸವರಾಜ್ ಪ್ರೌಢಶಾಲೆ ಸಭಾಂಗಣದಲ್ಲಿ ಗುರುವಾರ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆ ಮುಖ್ಯಶಿಕ್ಷಕರಿಗೆ ಆಯೋಜಿಸಿದ್ದ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

    ಶಿಕ್ಷಣವೇ ದೇಶದ ಶಕ್ತಿ. ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ರೀತಿ ಶಾಲೆಯಲ್ಲಿ ಶಿಕ್ಷಕರಿಗೆ ಸ್ವಾತಂತ್ರ್ಯವನ್ನು ನೀಡಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು. ಸಂವಿಧಾನಾತ್ಮಕವಾಗಿ ಬಂದಿರುವ ಆರ್‌ಟಿಇ ಪಠ್ಯ ಪುಸ್ತಕವನ್ನು ಎಲ್ಲ ಶಿಕ್ಷಕರೂ ಓದಿ ತಿಳಿದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

    ಡಿಡಿಪಿಐ ಕೆ.ಎ.ರವಿಶಂಕರ ರೆಡ್ಡಿ ಮಾತನಾಡಿ, ಗುಣಮಟ್ಟದ ಶಿಕ್ಷಣದಿಂದ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಶಿಕ್ಷಕರು ಮಕ್ಕಳಲ್ಲಿ ಮಾನವೀಯ, ನೈತಿಕ ಮೌಲ್ಯ ಬೆಳೆಸಲು ಆದ್ಯತೆ ನೀಡಬೇಕು ಎಂದರು.

    ಬಿಇಒ ಪಿ.ರಾಮಯ್ಯ, ಬೆಳಗಾವಿ ಬಿ.ಇಡಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸತೀಶ್‌ಕುಂಬಾರ್, ಆಂಗ್ಲಭಾಷಾ ಸಂಪನ್ಮೂಲ ವ್ಯಕ್ತಿ ಎಚ್.ಎಂ.ಬಸವರಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಾಗರಾಜಾಚಾರ್, ಶಶಿಧರ್, ಪ್ರಾಚಾರ್ಯ ಎಚ್.ಆರ್.ತಿಪ್ಪೇಸ್ವಾಮಿ, ಹರೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts