More

    ಹೆಸ್ಕಾಂ ಸಿಬ್ಬಂದಿಯಿಂದ ಪ್ರತಿಭಟನೆ

    ಸವದತ್ತಿ: ಕರ್ತವ್ಯನಿರತ ಹೆಸ್ಕಾಂ ಎಇಇ ಸಿ.ಎಸ್.ಮಠಪತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಹೆಸ್ಕಾಂ ಸಿಬ್ಬಂದಿ ಹಾಗೂ ಅಧಿಕಾರಿಗಳು ಸವದತ್ತಿ ಪಟ್ಟಣದ ಉಪವಿಭಾಗ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

    ಹಲ್ಲೆ ನಡೆಸಿರುವ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಕ್ಲಾಸ್-1 ಇಲೆಕ್ಟ್ರಿಕಲ್ ಗುತ್ತಿಗೆದಾರ ರವಿಕುಮಾರ ಬಸಪ್ಪ ಕುಂಬಾರ ಅವರ ಲೈಸೆನ್ಸ್ ಕಪ್ಪು ಪಟ್ಟಿಯಲ್ಲಿ ಸೇರಿಸಬೇಕು. ಹೆಸ್ಕಾಂ ಕಂಪನಿ ವ್ಯಾಪ್ತಿಯಲ್ಲಿ ಯಾವುದೇ ಗುತ್ತಿಗೆ ಕೆಲಸ ಮಾಡಲು ಅವರಿಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು. ಮನವೊಲಿಸಲು ಬಂದ ತಾಲೂಕುಮಟ್ಟದ ಅಧಿಕಾರಿಗಳ ಮಾತಿಗೆ ಒಪ್ಪದೇ ಸ್ಥಳಕ್ಕೆ ಮೇಲಧಿಕಾರಿಗಳು ಬರುವ ತನಕ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದರು.

    ಸಂಜೆ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೆಳಗಾವಿಯ ಹೆಸ್ಕಾಂ ಅಧೀಕ್ಷಕ ಅಭಿಯಂತ ಗಿರಿಧರ ಕುಲಕರ್ಣಿ ಮಾತನಾಡಿ, ಗುತ್ತಿಗೆದಾರನ ವರ್ತನೆ ಖಂಡನೀಯವಾಗಿದೆ. ಹಲ್ಲೆ ನಡೆಸಿದ ವ್ಯಕ್ತಿಗಳಲ್ಲಿ ಓರ್ವ ನಮ್ಮ ವಿಭಾಗದಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದಾರೆ. ಇನ್ನೊಬ್ಬ ನಮ್ಮ ಜತೆಯಲ್ಲೇ ಇದ್ದು ಗುತ್ತಿಗೆ ಕೆಲಸ ಮಾಡುವ ವ್ಯಕ್ತಿಯಾಗಿದ್ದು, ಹಲ್ಲೆ ನಡೆಸಿದ್ದು ದುರದೃಷ್ಟಕರ ಸಂಗತಿ ಎಂದರು.

    ಈಗಾಗಲೇ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂದಿನ ನಡೆ ಕುರಿತು ಎಸ್‌ಪಿ ಅವರೊಂದಿಗೆ ಚರ್ಚಿಸಲಾಗುವುದು. ಈ ಪ್ರಕರಣ
    ಕುರಿತು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
    ಹೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts