More

    ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ

    ಶಿರಸಿ: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಹೆಸ್ಕಾಂ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

    ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ, ರೈತರಿಗೆ, ಜನಸಾಮಾನ್ಯರಿಗೆ ಹೊರೆಯಾಗಿರುವ ವಿದ್ಯುತ್ ದರವನ್ನು ಸರ್ಕಾರ ಕೂಡಲೆ ಇಳಿಸಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಬ್ಲಾಕ್ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು. ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿ ಇರುವಾಗ ರೈತರಿಗೆ ಉಚಿತ ವಿದ್ಯುತ್ ನೀಡಿರುವುದನ್ನು ಎಲ್ಲರೂ ಸ್ಮರಿಸಬೇಕು. ಬಿಜೆಪಿ ಸರ್ಕಾರಕ್ಕೆ ರೈತರು, ಬಡವರು ಹಾಗೂ ಕೂಲಿ ಕಾರ್ವಿುಕರ ಬಗ್ಗೆ ಕಾಳಜಿಯಿಲ್ಲ. ದರ ಇಳಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

    ಈ ವೇಳೆ ಬಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಬನವಾಸಿ ಬ್ಲಾಕ್ ಅಧ್ಯಕ್ಷ ಸಿ.ಎಫ್.ನಾಯ್ಕ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುಜಾತಾ ಗಾಂವಕರ, ಬ್ಲಾಕ್ ಅಧ್ಯಕ್ಷೆ ಗೀತಾ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಶೆಟ್ಟಿ, ಪ್ರಮುಖರಾದ ಆರ್.ಎಚ್. ನಾಯ್ಕ, ಅಬ್ಬಾಸ್ ತೋನ್ಸೆ, ಎಸ್.ಕೆ. ಭಾಗ್ವತ, ಸುಮಾ ಉಗ್ರಾಣಕರ, ಜ್ಯೋತಿ ಪಾಟೀಲ, ಸೂರ್ಯಪ್ರಕಾಶ ಹೊನ್ನಾವರ, ಮಾಧರ ರೇವಣಕರ, ಜಿ.ಎನ್. ಹೆಗಡೆ, ಪ್ರದೀಪ ಶೆಟ್ಟಿ, ಬಸವರಾಜ ದೊಡ್ಮನಿ, ಮಹೇಶ ನಾಯ್ಕ ಕರೂರ, ನಾಗರಾಜ ಮಡಿವಾಳ, ಪ್ರಸನ್ನ ಶೆಟ್ಟಿ, ಗಾಯತ್ರಿ ನೇತ್ರೇಕರ್,

    ಖಾದರ ಆನವಟ್ಟಿ, ನಾಗರಾಜ ಮುರ್ಡೆಶ್ವರ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts