25.7 C
Bangalore
Sunday, December 15, 2019

ಹೆಸ್ಕಾಂಗೆ 97 ಕೋಟಿ ರೂ.ನಷ್ಟ

Latest News

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

|ಇಮಾಮಹುಸೇನ್ ಗೂಡುನವರ ಬೆಳಗಾವಿ

ಪ್ರವಾಹ, ಮಳೆಯಿಂದ ಜಿಲ್ಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಹೆಸ್ಕಾಂ)ಕ್ಕೆ 97 ಕೋಟಿ ರೂ. ನಷ್ಟವಾಗಿದೆ. ಕತ್ತಲೆಯಲ್ಲಿದ್ದ ಜಿಲ್ಲೆಯ 315 ಗ್ರಾಮಗಳು ಬೆಳಕು ಕಂಡಿವೆ. ಆದರೆ, ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕೆಸರು ಅಡ್ಡಿಯಾಗಿದೆ!

ವಿದ್ಯುತ್ ಮಾರ್ಗ, ಪರಿಕರಗಳ ದುರಸ್ತಿಗಾಗಿ ಕಳೆದ 15 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ಎಲ್ಲ ಗ್ರಾಮಗಳಲ್ಲೂ ಸಮಸ್ಯೆ ಬಗೆಹರಿದಿದೆ. ಆದರೆ, ನದಿ ಪಾತ್ರದ ಕೃಷಿ ಭೂಮಿಯಲ್ಲಿ ಇನ್ನು ಪ್ರವಾಹದ ನೀರು ಸರಿದಿಲ್ಲ. ಕೆಸರು ತುಂಬಿಕೊಂಡಿದ್ದರಿಂದ ಪಂಪ್‌ಸೆಟ್‌ಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಸೌಲಭ್ಯ ಒದಗಿಸಲಾಗುತ್ತಿಲ್ಲ. ಕೃಷಿಭೂಮಿ ಒಣಗಿದ ಕೂಡಲೇ ಕಾರ್ಯಾಚರಣೆ ಚುರುಕುಗೊಳಿಸಲಾಗುವುದು. ಬಾಕಿ ಉಳಿದ ಎರಡು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಮಂಗಳವಾರದೊಳಗೆ ವಿದ್ಯುತ್ ವ್ಯವಸ್ಥೆ ಮಾಡಲಾಗುವುದು ಎಂದು ಹೆಸ್ಕಾಂ ಬೆಳಗಾವಿ ವೃತ್ತದ ಅೀಕ್ಷಕ ಅಭಿಯಂತ ಗಿರಿಧರ ಕುಲಕರ್ಣಿ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

17 ಸಾವಿರ ಕಂಬಗಳು ನಾಶ: ಬೆಳಗಾವಿ ಜಿಲ್ಲೆಯಲ್ಲಿ 220 ಕೆವಿ ಸಾಮರ್ಥ್ಯದ 7, 110 ಕೆವಿ ಸಾಮರ್ಥ್ಯದ 66, 33 ಕೆವಿ ಸಾಮರ್ಥ್ಯದ 65 ವಿದ್ಯುತ್ ವಿತರಣೆ ಕೇಂದ್ರಗಳಿವೆ. 72 ಸಾವಿರ ವಿದ್ಯುತ್ ಪರಿವರ್ತಕಗಳಿವೆ. 11 ಕೆವಿ ಸಾಮರ್ಥ್ಯದ 24 ಸಾವಿರ ಕಿಮೀ ವಿದ್ಯುತ್ ಮಾರ್ಗವಿದೆ. ಪ್ರವಾಹದಲ್ಲಿ ಸುಮಾರು 21 ಸಾವಿರ ವಿದ್ಯುತ್ ಕಂಬಗಳು ಮುಳುಗಿದ್ದವು. ಇವುಗಳ ಪೈಕಿ 17 ಸಾವಿರ ಕಂಬಗಳು ಹಾಳಾಗಿವೆ. 5 ಸಾವಿರ ಪರಿವರ್ತಕಗಳು ನೀರಿನಲ್ಲಿ ಮುಳುಗಿವೆ. ಜಲಾವೃತ ಸ್ಥಿತಿಯಲ್ಲಿದ್ದ 11 ವಿದ್ಯುತ್ ಕೇಂದ್ರಗಳಲ್ಲಿ ಒಂದಿಷ್ಟು ಸಮಸ್ಯೆ ಸೃಷ್ಟಿಯಾಗಿವೆ. ಖಾನಾಪುರ, ಅಥಣಿ, ಚಿಕ್ಕೋಡಿ, ರಾಯಬಾಗ, ಗೋಕಾಕ, ರಾಮದುರ್ಗ ಮತ್ತು ಸವದತ್ತಿ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದೆ.

ಬೆಸ್ಕಾಂ ನೆರವು: ಪ್ರವಾಹದಿಂದ ಹಾಳಾಗಿರುವ ವಿದ್ಯುತ್ ಮಾರ್ಗ, ಪರಿಕರ ದುರಸ್ತಿಗೆ ಬೆಸ್ಕಾಂ ಸಿಬ್ಬಂದಿ ಕೈಜೋಡಿಸಿ ದ್ದಾರೆ. 15 ದಿನಗಳ ಹಿಂದೆಯೇ 200 ಸಿಬ್ಬಂದಿ ಬಂದಿದ್ದು, ಸೆ.4ರಂದು ಹೆಚ್ಚುವರಿಯಾಗಿ 100 ಸಿಬ್ಬಂದಿ ಬರಲಿದ್ದಾರೆ. ಜತೆಗೆ, ಹೆಸ್ಕಾಂನ 300 ಸಿಬ್ಬಂದಿ ಮತ್ತು 50 ಗುತ್ತಿಗೆದಾರರು ಸೇರಿ ವಿದ್ಯುತ್ ಮಾರ್ಗ ದುರಸ್ತಿಗೆ ಶ್ರಮಿಸುತ್ತಿದ್ದಾರೆ.

ವೇಗ ಪಡೆಯಲಿ ಕಾರ್ಯ: ನದಿ ಪಾತ್ರದ ಕೃಷಿ ಭೂಮಿಯಲ್ಲಿ ನೀರು ಸರಿಯದಿರುವುದು, ಕೆಸರಿನ ಕಾರಣ ನೀಡಿ ವಿದ್ಯುತ್ ಕಂಬಗಳು, ಪರಿವರ್ತಕಗಳ ದುರಸ್ತಿಗೆ ಸಿಬ್ಬಂದಿ ಹಿಂದೇಟು ಹಾಕುತ್ತಿದ್ದಾರೆ. ಕೆಲವೆಡೆ ಭೂಮಿ ಒಣಗಿದ ಬಳಿಕ, ಕರೆ ಮಾಡಿದರೂ ಸಂಪರ್ಕಕ್ಕೆ ಸಿಗುತ್ತಿಲ್ಲ. ಪ್ರವಾಹದ ಅಬ್ಬರ ತಗ್ಗಿ 15 ದಿನ ಕಳೆದರೂ ದುರಸ್ತಿ ಕಾರ್ಯ ವೇಗ ಪಡೆದುಕೊಂಡಿಲ್ಲ. ಹಾಳಾಗಿರುವ ಪಂಪ್‌ಸೆಟ್‌ಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕಒದಗಿಸಬೇಕು ಎಂದು ಸವದತ್ತಿ ತಾಲೂಕಿನ ಮುನವಳ್ಳಿಯ ರೈತರು ಒತ್ತಾಯಿಸಿದ್ದಾರೆ.

ಪ್ರವಾಹ ಹಾಗೂ ಮಳೆಯಿಂದ 97 ಕೋಟಿ ರೂ. ನಷ್ಟ ಸಂಭವಿಸಿರುವ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ದುರಸ್ತಿಗಾಗಿ ಅಗತ್ಯವಿರುವ ವಿದ್ಯುತ್ ಪರಿಕರಗಳು ಬಂದಿವೆ. ಕಾರ್ಯಾಚರಣೆಗೆ ಅನುದಾನದ ಕೊರತೆ ಇಲ್ಲ.
|ಗಿರಿಧರ ಕುಲಕರ್ಣಿ ಅದಿಕ್ಷಕ ಅಭಿಯಂತ ಬೆಳಗಾವಿ ವೃತ್ತ ಹೆಸ್ಕಾಂ

ಸಾರ್ವಜನಿಕರು ಎಚ್ಚರ ವಹಿಸಲಿ

ಪ್ರವಾಹದಿಂದಾಗಿ ಕೃಷಿ ಭೂಮಿಯಲ್ಲಿರುವ ಪಂಪ್‌ಸೆಟ್‌ಗಳು ಹಾಳಾಗಿವೆ. ರೈತರು ಅವುಗಳನ್ನು ತೆಗೆಯಲು ಹೋದಾಗ ಎಚ್ಚರ ವಹಿಸಬೇಕು. ವಿದ್ಯುತ್ ತಂತಿಗಳು ಕಡಿತಗೊಂಡಿದ್ದರೆ ಅಥವಾ ಪರಿಕರಗಳು ಹಾಳಾಗಿದ್ದರೆ ತಾವೇ ದುರಸ್ತಿಗೆ ಮುಂದಾಗುವುದು ಬೇಡ. ವಿದ್ಯುತ್‌ಗೆ ಸಂಬಂಸಿದ ಯಾವುದೇ ದೂರುಗಳಿದ್ದರೆ ತಕ್ಷಣ ಸಮೀಪದ ಅಕಾರಿಗಳನ್ನು ಸಂಪರ್ಕಿಸಬೇಕು ಎಂದು ಗಿರಿಧರ ಕುಲಕರ್ಣಿ ಸಲಹೆ ನೀಡಿದ್ದಾರೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...