ಶ್ರೀನಗರ: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ (Hezbollah Chief) ಹಸನ್ ನಸ್ರಲ್ಲಾ ಹತ್ಯೆಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಹತ್ಯೆಯನ್ನು ಖಂಡಿಸಿ ವ್ಯಾಪಕ ಪ್ರತಿಭಟನೆ (Protest) ನಡೆದಿದೆ. ಜಮ್ಮು-ಕಾಶ್ಮೀರದ ಶ್ರೀನಗರ, ಬುದ್ಗಾಮ್ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ಈ ಕುರಿತು ಮಾತನಾಡಿರುವ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ (Mehbooba Mufti), ವೈಮಾನಿಕ ದಾಳಿಯಲ್ಲಿ ಹತನಾದ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಒಬ್ಬ ಹುತಾತ್ಮ. ಲೆಬನಾನ್ ಮತ್ತು ಗಾಜಾದಲ್ಲಿ ಸತ್ತವರು ಹುತಾತ್ಮರಾಗಿದ್ದು, ನಮ್ಮ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಸ್ರಲ್ಲಾ ಅವರ ಸ್ಮರಣಾರ್ಥವಾಗಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ನಿಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.
#WATCH | A protest march was held in Jammu & Kashmir's Budgam against the killing of Hezbollah chief Hassan Nasrallah by the Israel Defence Force (IDF). pic.twitter.com/EhTYAMFKRd
— ANI (@ANI) September 28, 2024
ಇದನ್ನೂ ಓದಿ: ಇವರೇ ನೋಡಿ Bigg Boss ಸೀಸನ್-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಲೆಬನಾನ್ ಮತ್ತು ಗಾಜಾದ ಹುತಾತ್ಮರಿಗೆ ವಿಶೇಷವಾಗಿ ಹಸನ್ ನಸ್ರಲ್ಲಾ ಅವರೊಂದಿಗೆ ಐಕಮತ್ಯಕ್ಕಾಗಿ ನಾಳೆ ನನ್ನ ಪ್ರಚಾರ ಕಾರ್ಯವನ್ನು ಸ್ಥಗಿತಗೊಳಿಸುತ್ತಿದ್ದೇನೆ. ಈ ಅಪಾರ ದುಃಖ ಮತ್ತು ಅನುಕರಣೀಯ ಪ್ರತಿರೋಧದ ಸಮಯದಲ್ಲಿ ನಾವು ಪ್ಯಾಲೆಸ್ಟೈನ್ ಮತ್ತು ಲೆಬನಾನ್ ಜನರೊಂದಿಗೆ ನಿಲ್ಲುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಶುಕ್ರವಾರ ಬೈರುತ್‌ನಲ್ಲಿ ಇಸ್ರೇಲಿ ನಡೆಸಿದ ಸರಣಿ ವೈಮಾನಿಕ ದಾಳಿಯಲ್ಲಿ ನಸ್ರಲ್ಲಾ ಅವರ ಪುತ್ರಿ ಝೈನಾಬ್ ಕೂಡ ಮೃತಪಟ್ಟಿದ್ದಾರೆ. ಶುಕ್ರವಾರ ಉದ್ದೇಶಿತ ವೈಮಾನಿಕ ದಾಳಿಯಲ್ಲಿ ನಸ್ರಲ್ಲಾ ಜೊತೆಗೆ ಹಲವಾರು ಹಿರಿಯ ಹಿಜ್ಬುಲ್ಲಾ ನಾಯಕರು ಕೊಲ್ಲಲ್ಪಟ್ಟರು ಎಂದು ಇಸ್ರೇಲಿ ಮಿಲಿಟರಿ ದೃಢಪಡಿಸಿತು.ಹಸನ್ ನಸ್ರಲ್ಲಾ ಹಿಜ್ಬುಲ್ಲಾ ಸಂಘಟನೆಯ ನೇತೃತ್ವ ವಹಿಸಿ ಇಸ್ರೇಲ್ನೊಂದಿಗೆ ಅನೇಕ ಸಂಘರ್ಷಗಳಲ್ಲಿ ತೊಡಗಿದ್ದರು ಮತ್ತು ಸಿರಿಯನ್ ಅಂತರ್ಯುದ್ಧದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು.
Cancelling my campaign tomorrow in solidarity with the martyrs of Lebanon & Gaza especially Hassan Nasarullah. We stand with the people of Palestine & Lebanon in this hour of immense grief & exemplary resistance.
— Mehbooba Mufti (@MehboobaMufti) September 28, 2024