ಯುವತಿಯ ಅಪಹರಣದ ಸುತ್ತ … 'ಹೈಡ್ ಅಂಡ್ ಸೀಕ್' ಫಸ್ಟ್ ಲುಕ್ ಬಿಡುಗಡೆ

Hide and Seek 5 New
Published on

ಬೆಂಗಳೂರು: 'ಲಕ್ಷ್ಮಣ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅನೂಪ್​ ರೇವಣ್ಣ ಈಗ 'ಹೈಡ್​ ಅಂಡ್​ ಸೀಕ್​' ಎಂಬ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಈ ಚಿತ್ರದಲ್ಲಿ ಅವರಿಗೆ ನಾಯಕಿಯಾಗಿ ಡಾ. ರಾಜಕುಮಾರ್​ ಮೊಮ್ಮಗಳು ಧನ್ಯಾ ರಾಮಕುಮಾರ್​ ಅಭಿನಯಿಸಿದ್ದು, ಈಗಾಗಲೇ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ.

ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೇಕಿಂಗ್ ವೀಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪುನೀತ್ ನಾಗರಾಜು ಅವರ ನಿರ್ದೇಶನದ ಈ ಚಿತ್ರದಲ್ಲಿ ಅನೂಪ್ ರೇವಣ್ಣ ಒಬ್ಬ ಕಿಡ್ನಾಪರ್ ಆಗಿ ಕಾಣಿಸಿಕೊಂಡಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಿತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದರೆ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಿದರು.

ಒಬ್ಬ ಯುವತಿಯ ಅಪಹರಣದ ಸುತ್ತ ಸುತ್ತುತ್ತದಂತೆ ಮತ್ತು ಇಲ್ಲಿ ನಾಯಕನೇ ಕಿಡ್ನಾಪರ್​ ಆಗಿರುತ್ತಾನಂತೆ. ಈ ಕುರಿತು ಮಾತನಾಡಿದ ನಿರ್ದೇಶಕ ಪುನೀತ್​ ನಾಗರಾಜು, 'ಇದೊಂದು ಸಸ್ಪೆನ್ಸ್​ ಥ್ರಿಲ್ಲರ್​ ಚಿತ್ರವಾಗಿದ್ದು, ಬೆಂಗಳೂರು, ಮಾಗಡಿ, ಚಿಕ್ಕಮಗಳೂರು ಸುತ್ತಮುತ್ತ ೩೦ ದಿನಗಳ ಕಾಲ ಚಿತ್ರೀಕರಿಸಿದ್ದೇವೆ. ಇಲ್ಲಿ ನಾಯಕನೇ ಕಿಡ್ನಾಪರ್ ಆಗಿದ್ದು, ಧನ್ಯಾ ರಾಮ್‌ಕುಮಾರ್ ಒಬ್ಬ ಬ್ಯುಸಿನೆಸ್‌ಮ್ಯಾನ್ ಮಗಳಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಿವರ್ಸ್ ಸ್ಕ್ರೀನ್ ಪ್ಲೈ ಮೂಲಕ ಕಥೆ ಹೇಳಲು ಪ್ರಯತ್ನ ಮಾಡಿದ್ದೇವೆ' ಎಂದು ಹೇಳಿದರು,

ನಾಯಕ ಅನೂಪ್ ಮಾತನಾಡುತ್ತಾ, 'ನನ್ನ ಹಿಂದಿನ ಚಿತ್ರದ ಪಾತ್ರಕ್ಕೂ ಇದಕ್ಕೂ ಬಹಳ ವ್ಯತ್ಯಾಸವಿದೆ. ಜಾಸ್ತಿ ಮಾತಾಡದ, ಯಾವುದನ್ನೂ ಎಕ್ಸ್ಪ್ರೆಸ್​ ಮಾಡದ ವ್ಯಕ್ತಿ. ನಾನಿಲ್ಲಿ ಹೀರೋ, ವಿಲನ್​ ಎರಡೂ ತರಹದ ಪಾತ್ರ ಮಾಡಿದ್ದೇನೆ' ಎಂದರೆ, ನಾಯಕಿ ಧನ್ಯಾ ರಾಮ್‌ಕುಮಾರ್, 'ತುಂಬಾ ತಿರುವುಗಳಿರುವ ಚಿತ್ರ. ಕೊನೆಯ ತನಕ ಏನಾಗುತ್ತೆ ಅಂತ ಗೊತ್ತಾಗಲ್ಲ' ಎಂದು ಹೇಳಿದರು.

ಸುನೇರಿ ಆರ್ಟ್ ಕ್ರಿಯೇಶನ್ಸ್ ಮ‌ೂಲಕ ಪುನೀತ್ ನಾಗರಾಜು, ವಸಂತ್ ರಾವ್ ಎಂ. ಕುಲಕರ್ಣಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಿಜೋ ಪಿ.ಜಾನ್ ಅವರ ಛಾಯಾಗ್ರಾಹಣ, ಸ್ಯಾಂಡಿ ಅದಾನ್ಕಿ ಸಂಗೀತ ಈ ಚಿತ್ರಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net