More

    ಕೋವಿಡ್​ನಂತೆಯೇ ಭಯ ಹುಟ್ಟಿಸುತ್ತಿರುವ ಹೊಸ ವೈರಸ್​; ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಹೈ ಅಲರ್ಟ್

    ನವದೆಹಲಿ: ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಕೋವಿಡ್-19 ಸೋಂಕು ಮೊಟ್ಟಮೊದಲು ಚೀನಾದಿಂದ ಹೊರಹೊಮ್ಮಿತ್ತು. ಇದಾದ ನಾಲ್ಕು ವರ್ಷಗಳ ನಂತರ ಮತ್ತೆ ಹೊಸ ಸಾಂಕ್ರಾಮಿಕ ಕಾಯಿಲೆ ಹರಡುತ್ತಿದ್ದು, ಮಕಳಲ್ಲಿ ವೇಗವಾಗಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರವು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಹೈ ಅಲರ್ಟ್​ ಘೋಷಿಸಿದೆ.

    ಕರ್ನಾಟಕ, ರಾಜಸ್ಥಾನ, ಗುಜರಾತ್, ಉತ್ತರಾಖಂಡ, ತಮಿಳುನಾಡು ಮತ್ತು ಹರಿಯಾಣ ಸೇರಿದಂತೆ 6 ರಾಜ್ಯಗಳಿಗೆ ಎಚ್ಚರಿಕೆಯನ್ನು ನೀಡಿದೆ. ಈ ಕಾರಣದಿಂದಾಗಿ, ಮುನ್ನೆಚ್ಚರಿಕೆ ಕ್ರಮವಾಗಿ, ಈ ರಾಜ್ಯಗಳ ಆಸ್ಪತ್ರೆಗಳು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಉಸಿರಾಟದ ತೊಂದರೆಯಿಂದ ಬರುವ ರೋಗಿಗಳನ್ನು ತ್ವರಿತವಾಗಿ ನಿಭಾಯಿಸಲು ಸೂಚನೆ ನೀಡಲಾಗಿದೆ.

    ಕರ್ನಾಟಕ ಸರ್ಕಾರವು ತನ್ನ ರಾಜ್ಯದ ಜನರಿಗೆ ಋತುಮಾನದ ಜ್ವರದ ಬಗ್ಗೆ ಜಾಗೃತಿ ವಹಿಸುವಂತೆ ಕೇಳಿಕೊಂಡಿದೆ. ಅಲ್ಲದೇ, ಕಾಲೋಚಿತ ಜ್ವರದ ಲಕ್ಷಣಗಳು, ಅಪಾಯಕಾರಿ ಅಂಶಗಳು ಮತ್ತು ಮಾಡಬೇಕಾದ ಮತ್ತು ಮಾಡಬಾರದ ಪಟ್ಟಿಯನ್ನು ಆರೋಗ್ಯ ಇಲಾಖೆ ವತಿಯಿಂದ ಬಿಡುಗಡೆ ಮಾಡಲಾಗಿದೆ.

    ಇದನ್ನೂ ಓದಿ: VIDEO| ಮೆಟ್ರೋ ಹಳಿ ದಾಟಲು ಹೋಗಿ ವ್ಯಕ್ತಿ ಮೃತ್ಯು; ಅವಸರವೇ ಇದಕ್ಕೆಲ್ಲಾ ಕಾರಣ ಎಂದ ಸಿಬ್ಬಂದಿ

    ಮಾರ್ಗಸೂಚಿಯಲ್ಲೇನಿದೆ?

    ಇದು ಸಾಮಾನ್ಯ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಕಡಿಮೆ ತೀವ್ರತೆ ಹೊಂದಿದ. ಇದು ಸಾಮಾನ್ಯವಾಗಿ ಐದರಿಂದ ಏಳು ದಿನಗಳವರೆಗೆ ಇರುತ್ತದೆ. ಅದಾಗ್ಯೂ, ಇದು ಮಕ್ಕಳಿಗೆ, ವೃದ್ಧರಿಗೆ, ಗರ್ಭಿಣಿಯರಿಗೆ, ಇಮ್ಯುನೊಕೊಂಪ್ರೊಮೈಸ್ಡ್ ಮತ್ತು ದೀರ್ಘಕಾಲೀನ ಔಷಧಿಗಳಾದ ಸ್ಟೆರಾಯ್ಡ್‌ಗಳನ್ನು ತೆಗೆದುಕೊಳ್ಳುವವರಿಗೆ ಹೆಚ್ಚಿನ ಅಪಾಯವನ್ನುಂಟುಮಾಡುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

    ಜ್ವರ, ಶೀತ, ಅಸ್ವಸ್ಥತೆ, ಹಸಿವಿನ ಕೊರತೆ, ವಾಕರಿಕೆ, ಸೀನುವಿಕೆ ಮತ್ತು ಒಣ ಕೆಮ್ಮು ಈ ರೋಗದ ಲಕ್ಷಣಗಳಾಗಿವೆ. ಹೀಗಾಗಿ ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳಬೇಕು. ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸಬೇಕು. ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು ಉತ್ತಮ.  ಫ್ಲೂ ಪೀಡಿತ ವ್ಯಕ್ತಿಗಳಿಂದ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಆರೊಗ್ಯ ಇಲಾಖೆಯ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts