More

    ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಹೈ ಅಲರ್ಟ್

    ಮಂಗಳೂರು: ಕರಾವಳಿಗೆ ಉಗ್ರ ಆತಂಕದ ಹಿನ್ನೆಲೆಯಲ್ಲಿ ಮಂಗಳೂರು ಅಂ.ರಾ. ವಿಮಾನ ನಿಲ್ದಾಣದ ಆವರಣದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಡ್ರೋನ್, ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳು ಪತ್ತೆಯಾದರೆ ತಕ್ಷಣ ವಿಮಾನ ನಿಲ್ದಾಣದ ಭದ್ರತಾ ವಿಭಾಗಕಕ್ಕೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

    ವಿಮಾನ ನಿಲ್ದಾಣದ ಸಿಐಎಸ್‌ಎಫ್ ಭದ್ರತಾ ಪಡೆ ಹಾಗು ಬಜ್ಪೆ ಪೊಲೀಸರು ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ತಪಾಸಣೆ ನಡೆಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.

    ಕೆಲವು ಸಮಯದ ಹಿಂದೆ ವಿಮಾನ ನಿಲ್ದಾಣದ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿತ್ತು. ಆ ಬಳಿಕ ಆ್ಯಂಟಿ ಡ್ರೋನ್ ವ್ಯವಸ್ಥೆ ಅಳವಡಿಸಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಕರಿನೆರಳು ಕಂಡು ಬಂದಿದ್ದರಿಂದ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಮಾಡಲಾಗಿದೆ.
    ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ನವದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದರು. ದೇಶದಾದ್ಯಂತ ಪ್ರಮುಖ ನಗರಗಳಲ್ಲಿ ಸ್ಪೋಟಕ್ಕೆ ಸಂಚು ರೂಪಿಸಿದ್ದನ್ನು ಪತ್ತೆ ಮಾಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts