ದೇಹದ ಈ ಭಾಗಗಳಲ್ಲಿ ನೋವು ಕಾಣಿಸಿಕೊಂಡ್ರೆ ಕೊಲೆಸ್ಟ್ರಾಲ್​ ಹೆಚ್ಚಾಗಿದೆ ಎಂದರ್ಥ! ಇಲ್ಲಿದೆ ಉಪಯುಕ್ತ ಮಾಹಿತಿ... High Cholesterol

High Cholesterol
Published on

High Cholesterol : ಕೊಲೆಸ್ಟ್ರಾಲ್ ದೇಹದಲ್ಲಿ ಕಂಡುಬರುವ ಒಂದು ರೀತಿಯ ಕೊಬ್ಬು. ಇದು ದೇಹಕ್ಕೆ ಅತ್ಯಗತ್ಯ. ಏಕೆಂದರೆ, ಜೀವಕೋಶಗಳನ್ನು ಸರಿಪಡಿಸಲು ಮತ್ತು ಹೊಸ ಕೋಶಗಳನ್ನು ರಚಿಸಲು ಇದು ಸಹಾಯ ಮಾಡುತ್ತದೆ. ಆದರೆ, ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದರೆ ತುಂಬಾ ಅಪಾಯ. ಹೃದಯಾಘಾತ, ಪಾರ್ಶ್ವವಾಯು, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಯಕೃತ್ತಿನ ಸಮಸ್ಯೆಗಳಂತಹ ಅನೇಕ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು.

ವಾಸ್ತವವಾಗಿ ಕೊಲೆಸ್ಟ್ರಾಲ್ ನಮ್ಮ ದೇಹವನ್ನು 2 ರೀತಿಯಲ್ಲಿ ಪ್ರವೇಶಿಸುತ್ತದೆ. ಮೊದಲನೆಯದು ಯಕೃತ್ತು ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುತ್ತದೆ ಮತ್ತು ಎರಡನೆಯದು ಸಾಮಾನ್ಯ ಆಹಾರದ ಮೂಲಕ ರೂಪುಗೊಳ್ಳುತ್ತದೆ. ಪ್ರಸ್ತುತ ಅಧಿಕ ಕೊಲೆಸ್ಟ್ರಾಲ್ ರೋಗಿಗಳ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಕೊಲೆಸ್ಟ್ರಾಲ್ ಒಂದು ರೀತಿಯ ಜಿಗುಟಾದ ವಸ್ತುವಾಗಿದ್ದು, ಇದು ಆರೋಗ್ಯಕ್ಕೆ ಹಾನಿಕಾರಕವೇನಲ್ಲ. ಜೀವಕೋಶಗಳನ್ನು ನಿರ್ಮಿಸಲು, ಜೀವಸತ್ವಗಳು ಮತ್ತು ಅನೇಕ ಹಾರ್ಮೋನುಗಳನ್ನು ತಯಾರಿಸಲು ದೇಹಕ್ಕೆ ಇದು ಅಗತ್ಯವಾಗಿರುತ್ತದೆ. ಯಾವುದನ್ನಾದರೂ ಅತಿಯಾಗಿ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗುವಂತೆಯೇ, ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ. ಇದನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯುತ್ತಾರೆ.

ಕೊಲೆಸ್ಟ್ರಾಲ್​ನಲ್ಲಿ ಎರಡು ವಿಧ

ಕೊಲೆಸ್ಟ್ರಾಲ್​ನಲ್ಲಿ 2 ವಿಧಗಳಿವೆ. ಅವುಗಳೆಂದರೆ LDL ಮತ್ತು HDL. ಎಲ್​ಡಿಎಲ್​ ಒಂದು ಕೆಟ್ಟ ಕೊಲೆಸ್ಟ್ರಾಲ್​ ಆಗಿದೆ. ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ ಅನ್ನು “ಕೆಟ್ಟ” ಕೊಲೆಸ್ಟ್ರಾಲ್ ಎಂದೂ ಕರೆಯುತ್ತಾರೆ. ಇದು ಕೊಲೆಸ್ಟ್ರಾಲ್‌ನ ಮುಖ್ಯ ಮೂಲವಾಗಿದೆ, ಇದು ಅಪಧಮನಿಗಳಲ್ಲಿ ಸಂಗ್ರಹಗೊಳ್ಳುತ್ತದೆ ಮತ್ತು ರಕ್ತದ ಹರಿವನ್ನು ನಿರ್ಬಂಧಿಸುತ್ತದೆ. ಹೆಚ್ಚಿನ ಮಟ್ಟದ ಎಲ್‌ಡಿಎಲ್ ಕೊಲೆಸ್ಟ್ರಾಲ್ ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಉತ್ತಮ ಕೊಲೆಸ್ಟ್ರಾಲ್ ಎಂದೂ ಕರೆಯಲ್ಪಡುವ ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್ ರಕ್ತದಿಂದ ಕೊಲೆಸ್ಟ್ರಾಲ್ ಅನ್ನು ಹೀರಿಕೊಳ್ಳುತ್ತದೆ ಮತ್ತು ದೇಹದಿಂದ ತೆಗೆದುಹಾಕಲು ಯಕೃತ್ತಿಗೆ ಹಿಂತಿರುಗಿಸುತ್ತದೆ. ಹೆಚ್ಚಿನ ಮಟ್ಟದ ಎಚ್‌ಡಿಎಲ್ ಕೊಲೆಸ್ಟ್ರಾಲ್, ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

ಅಧಿಕ ಕೊಲೆಸ್ಟ್ರಾಲ್‌ನ ಆರಂಭಿಕ ಹಂತಗಳಲ್ಲಿ ಸಾಮಾನ್ಯವಾಗಿ ಯಾವುದೇ ನಿರ್ದಿಷ್ಟ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಆದರೆ, ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆ ಲಕ್ಷಣಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ಇದನ್ನೂ ಓದಿ: ಇದುವರೆಗೂ ನೋಡದ ಬೋಲ್ಡ್​ ಅವತಾರದಲ್ಲಿ ಬಂದ್ರು ಕೀರ್ತಿ ಸುರೇಶ್​! ಎಲ್ಲ ಬಾಲಿವುಡ್​ ಮಹಿಮೆ ಅಂದ್ರು ಫ್ಯಾನ್ಸ್ | Keerthy Sureshಅಧಿಕ ರಕ್ತದೊತ್ತಡ: ಈ ಸಮಸ್ಯೆಯು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಳದಿಂದ ಉಂಟಾಗುತ್ತದೆ. ಕೊಲೆಸ್ಟ್ರಾಲ್ ಹೆಚ್ಚಳದಿಂದಾಗಿ ರಕ್ತನಾಳಗಳಲ್ಲಿ ಪ್ಲೇಕ್ ಸಂಗ್ರಹವಾಗುತ್ತದೆ. ಇದು ಅಧಿಕ ರಕ್ತದೊತ್ತಡದ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಆಗಾಗ ಎದೆ ನೋವು, ತಲೆನೋವು, ಸುಸ್ತು, ದೌರ್ಬಲ್ಯ, ಉಸಿರಾಟದ ತೊಂದರೆ ಮತ್ತು ವಾಂತಿಯ ಲಕ್ಷಣಗಳು ಸಹ ಕಂಡುಬರುತ್ತವೆ.

ಎದೆ ನೋವು, ವೇಗದ ಹೃದಯ ಬಡಿತ: ಎದೆ ನೋವು ಅಥವಾ ತ್ವರಿತ ಹೃದಯ ಬಡಿತವು ಅಧಿಕ ಕೊಲೆಸ್ಟ್ರಾಲ್ ಅನ್ನು ಸೂಚಿಸುತ್ತದೆ. ಅಧಿಕ ಕೊಲೆಸ್ಟ್ರಾಲ್ ಮಟ್ಟದಿಂದ ಅಧಿಕ ರಕ್ತದೊತ್ತಡ ಉಂಟಾಗುತ್ತದೆ. ಇದರಿಂದ ಹೃದಯಕ್ಕೆ ರಕ್ತವನ್ನು ಪಂಪ್ ಮಾಡಲು ಕಷ್ಟವಾಗುತ್ತದೆ. ಹೀಗಾಗಿ ಎದೆನೋವು ಹಾಗೂ ವೇಗದ ಹೃದಯ ಬಡಿತವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ.

ಚರ್ಮದ ಬಣ್ಣ ಬದಲಾವಣೆ: ದೇಹದಲ್ಲಿನ ಕೊಲೆಸ್ಟ್ರಾಲ್ ಹೆಚ್ಚಳದಿಂದ ರಕ್ತದ ಹರಿವು ಕಡಿಮೆಯಾಗುತ್ತದೆ. ಇದರ ನೇರ ಪರಿಣಾಮವು ಚರ್ಮದ ಮೇಲೆ ಗೋಚರಿಸುತ್ತದೆ. ಕಡಿಮೆ ರಕ್ತ ಪರಿಚಲನೆಯಿಂದಾಗಿ, ದೇಹದ ಜೀವಕೋಶಗಳು ಸಾಕಷ್ಟು ಪ್ರಮಾಣದ ಪೋಷಕಾಂಶಗಳನ್ನು ಪಡೆಯುವುದಿಲ್ಲ. ಇದಲ್ಲದೆ, ಆಮ್ಲಜನಕದ ಕೊರತೆಯಾಗಿ ಚರ್ಮದ ಬಣ್ಣದಲ್ಲಿ ಬದಲಾವಣೆಗೆ ಕಾರಣವಾಗುತ್ತದೆ.

ಕಾಲುಗಳಲ್ಲಿ ನೋವು: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಂತೆ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತದೆ. ಇದು ಕಾಲುಗಳಲ್ಲಿ ನೋವನ್ನು ಉಂಟುಮಾಡುತ್ತದೆ. ಇದು ಪೆರಿಫೆರಲ್​ ಐಟಿಎಲ್​ ರೋಗವನ್ನು ಉಂಟುಮಾಡುತ್ತದೆ. ಈ ಸ್ಥಿತಿಯಲ್ಲಿ ಅಪಧಮನಿಗಳ ಅಡಚಣೆಯಿಂದಾಗಿ ರಕ್ತ ಪರಿಚಲನೆ ನಿಧಾನವಾಗುತ್ತದೆ.

ಕೊಲೆಸ್ಟ್ರಾಲ್​ ಮಟ್ಟ ಸಮತೋಲನ ಕಾಪಾಡಿಕೊಳ್ಳುವುದು ಹೇಗೆ?

ಆರೋಗ್ಯಕರ ಆಹಾರವನ್ನು ಸೇವಿಸಿ. ಅಲ್ಲದೆ, ನಿಮ್ಮ ಆಹಾರದಲ್ಲಿ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬಿನ ಪ್ರಮಾಣವನ್ನು ಮಿತಿಗೊಳಿಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟಗಳ ಏರಿಕೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಒಮೆಗಾ 3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಪ್ರಯೋಜನಕಾರಿಯಾಗಿದೆ. ಇದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಮೂಲಕ, ಅಧಿಕ ರಕ್ತದೊತ್ತಡವನ್ನು ಸಾಮಾನ್ಯ ಸ್ಥಿತಿಯಲ್ಲಿಡಬಹುದು. ಇದು ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಕರಗಬಲ್ಲ ಫೈಬರ್ ಆಹಾರಗಳಾದ ಕಿಡ್ನಿ ಬೀನ್ಸ್, ಓಟ್ ಮೀಲ್, ಮೊಳಕೆ ಕಾಳುಗಳು, ಸೇಬುಗಳು ಮತ್ತು ಪ್ಲಮ್ ಕೂಡ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೆ ದಿನನಿತ್ಯದ ವ್ಯಾಯಾಮದಿಂದ ದೇಹದಲ್ಲಿರುವ ಹಲವಾರು ರೋಗಗಳಿಂದ ಮುಕ್ತಿ ಪಡೆಯಬಹುದು.

ಹಕ್ಕು ನಿರಾಕರಣೆ: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರ. ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net