ಬಹುಕೋಟಿ ಹಗರಣ; ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಜಾಗೊಳಿಸಿದ ಆಂಧ್ರಪ್ರದೇಶ ಹೈಕೋರ್ಟ್

Chandrababu Naidu
Published on

ಅಮರಾವತಿ: ಅಮರಾವತಿ ಇನ್ನರ್​ ರಿಂಗ್​ ರೋಡ್ (IRR)​ ಜೋಡಣೆ ಹಾಗೂ ಫೈಬರ್​ ನೆಟ್​ ಹಗರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಭಾರೀ ಹಿನ್ನಡೆಯಾಗಿದ್ದು, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್​ ತಿರಸ್ಕರಿಸಿದೆ.

ಆಗಸ್ಟ್​ ತಿಂಗಳಲ್ಲಿ ನೀರಾವರಿ ಯೋಜನೆಗಳನ್ನು ಜಾರಿ ಮಾಡುವಂತೆ ಆಗ್ರಹಿಸಿ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಅಂಗಲ್ಲು ಗ್ರಾಮದಲ್ಲಿ ರ‍್ಯಾಲಿ ವೇಳೆ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್​ ತಿರಸ್ಕರಿಸಿದೆ.

ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸುರೇಶ್​ ರೆಡ್ಡಿ, ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ಧಾರೆ.

ಅಮರಾವತಿ ಇನ್ನರ್​ ರಿಂಗ್​ ರೋಡ್ (IRR)​ ಜೋಡಣೆ ಹಾಗೂ ಫೈಬರ್​ ನೆಟ್​ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸಿಐಡಿ ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ ನಾರಾ ಲೋಕೇಶ್​ ವಿರುದ್ಧ FIR ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದೆ.

ಏತನ್ಮಧ್ಯೆ, ವಿಜಯವಾಡ ಎಸಿಬಿ ನ್ಯಾಯಾಲಯವು ಅವರ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ IRR ಮತ್ತು ಫೈಬರ್ ನೆಟ್ ಹಗರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರ ಹೆಸರಿನಲ್ಲಿ ಸಿಐಡಿ ಹೊರಡಿಸಿದ ಕೈದಿ ಟ್ರಾನ್ಸಿಟ್ ವಾರಂಟ್‌ಗಳ ವಿಚಾರಣೆಯನ್ನು ಆಲಿಸುವ ಸಾಧ್ಯತೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net