More

    ಕಪಿಲ್ ಮೋಹನ್ ವಿರುದ್ಧದ ಪ್ರಕರಣ ಕೈ ಬಿಟ್ಟ ಹೈಕೋರ್ಟ್

    ಬೆಂಗಳೂರು: ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ (ಪಿಎಂಎಲ್ಎ) ಅನ್ವಯ ದಾಖಲಿಸಿದ್ದ ಪ್ರಕರಣ ಮತ್ತು ಆ ಸಂಬಂಧ ಜಾರಿ ಮಾಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ.

    ಪಿಎಂಎಲ್ಎ ಸೆಕ್ಷನ್ 50ರ ಅಡಿ 2023ರ ಫೆ. 2ರಂದು ಜಾರಿ ನಿರ್ದೇಶನಾಲಯ ತಮ್ಮ ವಿರುದ್ಧ ಜಾರಿ ಮಾಡಿರುವ ಸಮನ್ಸ್ ವಜಾಕ್ಕೆ ಕೋರಿ ಕಪಿಲ್ ಮೋಹನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಪುರಸ್ಕರಿಸಿದೆ.

    ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ ಬಳಿಕ ಸಲ್ಲಿಸಿದ್ದ ಬಿ ಅಂತಿಮ ವರದಿಯನ್ನು ವಿಚಾರಣಾಧೀನ ನ್ಯಾಯಾಲಯ ಒಪ್ಪಿಕೊಂಡಿದೆ. ಹೀಗಾಗಿ ಬಿ ಅಂತಿಮ ವರದಿಗೆ ಸಂಬಂಧಿಸಿದ ಆದೇಶ ತಾರ್ಕಿಕ ಅಂತ್ಯ ಕಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts