More

    ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಹೈಕೋರ್ಟ್ ಕೆಂಡಾಮಂಡಲ

    ಬೆಂಗಳೂರು: ಕಂಟೇನ್ಮೆಂಟ್ ವಲಯಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಲ್ಲಿ ಹಾಗೂ ಅಲ್ಲಿನ ಜನರಿಗೆ ಆಹಾರ ಕಿಟ್ ಪೂರೈಸುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಹೈಕೋರ್ಟ್ ಕಿಡಿಕಾರಿದೆ.

    ನಗರಾಭಿವೃದ್ಧಿ ಇಲಾಖೆ ಅಪರ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಯುಕ್ತರು ಮಂಗಳವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಖುದ್ದು ಹಾಜರಾಗಿ ವಿವರಣೆ ನೀಡಬೇಕೆಂದು ತಾಕೀತು ಮಾಡಿದೆ. ಕೋವಿಡ್-19 ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಅನನುಕೂಲತೆಬಗೆಹರಿಸಲು ಕೋರಿ ಸಲ್ಲಿಕೆಯಾಗಿರುವ ಪಿಐಎಲ್​ಗಳನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

    ಇದನ್ನೂ ಓದಿ: ಸಿಗಲಿಲ್ಲ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕಿ 

    ಬಿಬಿಎಂಪಿ ಪರ ವಕೀಲರು ಸಲ್ಲಿಸಿದ ಪ್ರಮಾಣಪತ್ರ ಪರಿಶೀಲಿಸಿದ ಪೀಠ, ಕಂಟೇನ್ಮೆಂಟ್ ವಲಯಗಳಲ್ಲಿರುವ ಬಡ ಹಾಗೂ ನಿರ್ಗತಿಕರನ್ನು ಗುರುತಿಸುವ ಕೆಲಸವನ್ನೂ ಬಿಬಿಎಂಪಿ ಮಾಡಿಲ್ಲ. ಅಲ್ಲಿ ಮಾರ್ಗಸೂಚಿ ಜಾರಿ ಮಾಡುವ ಹಾಗೂ ನಿರ್ಗತಿಕರಿಗೆ ಆಹಾರ ಕಿಟ್ ಹಂಚುವ ಸಂಬಂಧ ಜೂ. 25 ಹಾಗೂ ಜು.9ರಂದು ಕೋರ್ಟ್ ನೀಡಿರುವ ಆದೇಶಗಳನ್ನೂ ಪಾಲನೆ ಮಾಡಿಲ್ಲ. ಎಲ್ಲ ಹಂತಗಳಲ್ಲೂ ಪಾಲಿಕೆ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತು. ಕಂಟೇನ್ಮೆಂಟ್ ಜೋನ್​ಗಳ ನಿರ್ವಹಣೆ ಕೇವಲ ಕಾಗದಗಳ ಮೇಲಷ್ಟೇ ಕಾಣುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

    ಸರ್ಕಾರಕ್ಕೂ ಚಾಟಿ: ಸರ್ಕಾರ ತನ್ನ ಆಡಳಿತ ಯಂತ್ರ ಉಪಯೋಗಿಸಿ ಕಂಟೇನ್ಮೆಂಟ್ ಜನರಿಗೆ ಆಹಾರ ಧಾನ್ಯ ಒದಗಿಸಬೇಕು ಎಂದು ನ್ಯಾಯಪೀಠ ಸೂಚಿಸಿತ್ತು. ಈ ಬಗ್ಗೆ ಸರ್ಕಾರ ಈವರೆಗೂ ಉತ್ತರ ನೀಡಿಲ್ಲ. ಆದ್ದರಿಂದ ನಗರಾಭಿವೃದ್ಧಿ ಇಲಾಖೆ ಅಪರ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಯುಕ್ತರು ಮಂಗಳವಾರ ಮಧ್ಯಾಹ್ನ 2.30ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ವೇಳೆ ಹಾಜರಿರಬೇಕು ಎಂದು ನಿರ್ದೇಶನ ನೀಡಿತು.

    17 ಶಂಕಿತ ಐಸಿಸ್​ಗಳ ವಿರುದ್ಧ ಚಾರ್ಜ್​ಶೀಟ್​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts