More

    ಹೈಕೋರ್ಟ್ ಆದೇಶ ಪಾಲನೆಗೆ ವಿಳಂಬ ಮಾಡಿದ ಪಾಂಡವಪುರ ತಹಸೀಲ್ದಾರ್‌ಗಳಿಗೆ ಬಿತ್ತು 3 ಲಕ್ಷ ರೂ. ದಂಡ..!

    ಬೆಂಗಳೂರು: ವೃದ್ಧೆಯೊಬ್ಬರಿಗೆ ಸೇರಿದ ಜಮೀನಿನ ಸರ್ವೇ ನಡೆಸುವಂತೆ 8 ವರ್ಷಗಳ ಹಿಂದೆ ನೀಡಿದ್ದ ಆದೇಶ ಪಾಲಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ 2014ರಿಂದ 2022ರವರೆಗೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ತಹಸೀಲ್ದಾರ್ ಹುದ್ದೆ ನಿರ್ವಹಿಸಿದ್ದ ಅಧಿಕಾರಿಗಳಿಗೆ ಹೈಕೋರ್ಟ್ 3 ಲಕ್ಷ ರೂ. ದಂಡ ವಿಧಿಸಿದೆ.

    ನ್ಯಾಯಾಲಯದ ಆದೇಶದ ಹೊರತಾಗಿಯೂ ಜಮೀನಿನ ಸಮೀಕ್ಷೆ ನಡೆಸಲಾಗಿಲ್ಲ ಎಂದು ಆರೋಪಿಸಿ ಪಾರ್ವತಮ್ಮ ಎಂಬುವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ ಈ ಆದೇಶ ಮಾಡಿದೆ.

    ಪ್ರಕರಣವೇನು?
    ಪಾಂಡವಪುರ ತಾಲೂಕಿನ ಕುರಹಳ್ಳಿ ಗ್ರಾಮದ ವೃದ್ಧೆ ಪಾರ್ವತಮ್ಮ ಎಂಬುವರು ತಮಗೆ ಸೇರಿದ ಜಮೀನಿನ ಸರ್ವೇ ಹಾಗೂ ಪೋಡಿ ಮಾಡಿಕೊಡಲು ನಿರ್ದೇಶಿಸುವಂತೆ ಕೋರಿ 2014ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, 9 ತಿಂಗಳ ಒಳಗೆ ಅರ್ಜಿದಾರರಿಗೆ ಸೇರಿದ ಜಮೀನಿನ ಪೋಡಿ, ದುರಸ್ತಿ ಮಾಡಿಕೊಡಬೇಕು ಎಂದು 2014ರ ಜು.24ರಂದು ಕಂದಾಯ ಅಧಿಕಾರಿಗಳಿಗೆ ಆದೇಶಿಸಿದ್ದರು. ಈ ಆದೇಶ ಪಾಲನೆಯಾಗಿಲ್ಲ ಎಂದು ಆಕ್ಷೇಪಿಸಿ, ಅರ್ಜಿದಾರರು 2018ರಲ್ಲಿ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಚಾಟಿ ಬೀಸಿದ ಬಳಿಕ, ಎಚ್ಚೆತ್ತುಕೊಂಡ ಕಂದಾಯ ಅಧಿಕಾರಿಗಳು 2022ರ ೆ.10ರಂದು ನ್ಯಾಯಾಲಯದ ಆದೇಶ ಪಾಲನೆ ಮಾಡಿದ್ದರು.

    ಹೈಕೋರ್ಟ್ ಆದೇಶವೇನು?
    ಅರ್ಜಿದಾರರ ಜಮೀನಿನ ಸರ್ವೇ ನಡೆಸುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ 2014ರ ಜು.24ರಂದು ಆದೇಶ ಮಾಡಿದೆ. ಆದರೆ, 2022ರ ೆ.10ರಂದು ಅಂದರೆ ಅಂದಾಜು 8 ವರ್ಷಗಳ ಬಳಿಕ ಹೈಕೋರ್ಟ್ ಆದೇಶ ಪಾಲನೆ ಮಾಡಲಾಗಿದೆ. ಹಿರಿಯ ನಾಗರಿಕರಾಗಿರುವ ಅರ್ಜಿದಾರರನ್ನು ಕೋರ್ಟ್‌ಗೆ ಅಲೆಯುವಂತೆ ಮಾಡಲಾಗಿದೆ. ಇದರಿಂದ, ಅರ್ಜಿದಾರರು ಸಾಕಷ್ಟು ಹಣ ವೆಚ್ಚ ಮಾಡುವ ಜತೆಗೆ, ಮಾನಸಿಕ ಯಾತನೆ ಅನುಭವಿಸುವಂತಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.

    ಆದ್ದರಿಂದ, 2022ರ ೆ.10ರವರೆಗೆ ಪಾಂಡವಪುರ ತಾಲೂಕಿನಲ್ಲಿ ತಹಸೀಲ್ದಾರ್‌ಗಳಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳಿಂದ ಒಟ್ಟಾಗಿ 3 ಲಕ್ಷ ರೂ. ವಸೂಲಿ ಮಾಡಬೇಕು. ಈ ವಿಚಾರವನ್ನು ಅಧಿಕಾರಿಗಳ ಸೇವಾ ದಾಖಲೆಯಲ್ಲೂ ನಮೂದಿಸಬೇಕು. ಮಂಡ್ಯ ಜಿಲ್ಲಾಧಿಕಾರಿಗಳು ದಂಡದ ಮೊತ್ತ ಸಂಗ್ರಹಿಸಿ, ಒಂದು ತಿಂಗಳ ಒಳಗೆ ಅರ್ಜಿದಾರಿಗೆ ಪಾವತಿಸಿ, ಆ ಕುರಿತು ನ್ಯಾಯಾಲಯಕ್ಕೆ ಅನುಪಾಲನಾ ವರದಿ ಸಲ್ಲಿಸಬೇಕು. ಇಲ್ಲವಾದರೆ, ಜಿಲ್ಲಾಧಿಕಾರಿ ವಿರುದ್ಧವೂ ಗಂಭೀರ ಕ್ರಮ ಜರುಗಿಸಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts