More

    ಕೊನೆಗೂ ಅಲ್ಲಿ ರಾಜ್ಯೋತ್ಸವ ಆಚರಿಸಲು ಅವಕಾಶ ಸಿಕ್ತು: ಉಚ್ಚ ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

    ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಶ್ರೀ ಮಹದೇಶ್ವರ ದೇವಸ್ಥಾನ ಬಳಿ ಇರುವ ಮೈದಾನದಲ್ಲಿ ರಾಜ್ಯೋತ್ಸವ ಆಚರಿಸಲು ಕೊನೆಗೂ ಅವಕಾಶ ಸಿಕ್ಕಿದೆ. ಮೊದಲಿಗೆ ಅಲ್ಲಿ ರಾಜ್ಯೋತ್ಸವ ಆಚರಿಸಲು ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದ್ದರೂ, ಉಚ್ಚ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ.

    ಈದ್ಗಾ ಮೈದಾನ ಎಂದೂ ಕರೆಯಲ್ಪಡುವ ಚಾಮರಾಜಪೇಟೆಯ ಮೈದಾನದಲ್ಲಿ ನ. 1ರಿಂದ ಮೂರು ದಿನಗಳ ಕಾಲ ರಾಜ್ಯೋತ್ಸವ ಆಚರಿಸಲು ಉಚ್ಚ ನ್ಯಾಯಾಲಯ ಇಂದು ಷರತ್ತುಬದ್ಧ ಅನುಮತಿ ನೀಡಿದೆ. ಈ ಮೂಲಕ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಹೋರಾಟಕ್ಕೆ ಜಯ ಲಭಿಸಿದೆ.

    ಚಾಮರಾಜಪೇಟೆ ಮೈದಾನದಲ್ಲಿ ನ. 1ರಿಂದ 3ರವರೆಗೆ ರಾಜ್ಯೋತ್ಸವ, ಅಣ್ಣಮ್ಮ ದೇವಿ ಉತ್ಸವ ಮತ್ತು ಕನ್ನಡ ಸಂಸ್ಕೃತಿ ಪ್ರಸ್ತುತಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟ ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರಲ್ಲಿ ಅ. 17ರಂದು ಮನವಿ ಮಾಡಿಕೊಂಡಿತ್ತು. ಆದರೆ ಜಿಲ್ಲಾಧಿಕಾರಿ ಅನುಮತಿ ನೀಡಲು ನಿರಾಕರಿಸಿದ್ದರು. ಹೀಗಾಗಿ ಒಕ್ಕೂಟ ನ್ಯಾಯಾಲಯದ ಮೊರೆ ಹೋಗಿತ್ತು.

    ಒಕ್ಕೂಟದ ಅಧ್ಯಕ್ಷ ರಾಮೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಶ್ರೀಧರ ಪ್ರಭು ನ್ಯಾಯಪೀಠಕ್ಕೆ ಮೊಮೊ ಸಲ್ಲಿಸಿ ವಿಷಯವನ್ನು ಪ್ರಸ್ತಾಪಿಸಿದ್ದರು.

    ಇದನ್ನೂ ಓದಿ: ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?

    ಧಾರ್ಮಿಕ ಕಾರ್ಯಕ್ರಮವಲ್ಲ: ಇದು ಕರ್ನಾಟಕ ರಚನೆಯಾದ ದಿನ. ಇದನ್ನು ಎಲ್ಲ ಧರ್ಮದವರೂ ಹಬ್ಬದಂತೆ ಆಚರಿಸಬೇಕು. ಇಂಥ ಕಾರ್ಯಕ್ರಮಗಳಿಗೆ ಸರ್ಕಾರ ಆಕ್ಷೇಪ ವ್ಯಕ್ತಪಡಿಸಬಾರದು. ಇದು ಧಾರ್ಮಿಕ ಕಾರ್ಯಕ್ರಮವಲ್ಲ. ಸರ್ಕಾರವೇ ರಾಜ್ಯೋತ್ಸವ ಆಚರಿಸುವಾಗ ಇಲ್ಲಿ ಅನುಮತಿ ನೀಡುವುದಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದ ನ್ಯಾಯಪೀಠ, ಸರ್ಕಾರದ ನಿಲುವಿಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿತು.

    ಇದನ್ನೂ ಓದಿ: ಈ ದೇವಸ್ಥಾನದಲ್ಲಿ ಮಹಿಳೆಯರಿಗಷ್ಟೇ ಗರ್ಭಗುಡಿಗೆ ಪ್ರವೇಶ, ಪೂಜಿಸಲು ಅವಕಾಶ: ಮುಟ್ಟಾಗಿದ್ದರೂ ಇಲ್ಲಿ ಮೈಲಿಗೆಯಲ್ಲ!

    ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದ್ದೇಕೆ?: ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನುಮತಿ ನೀಡಿರಲಿಲ್ಲ. ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ ಆಗುವುದರಿಂದ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಅವರು ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಿರಲಿಲ್ಲ.

    ಇದನ್ನೂ ಓದಿ: ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

    ರಾಜ್ಯೋತ್ಸವ ಆಚರಣೆ ವೇಳೆ ಧಾರ್ಮಿಕ ಭಾವನೆಗಳ ವಿರುದ್ಧ ಹಾಗೂ ಕೋಮುಸೌಹಾರ್ದಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಬಾರದು ಎಂದು ಒಕ್ಕೂಟದ ಮುಖ್ಯಸ್ಥರಿಗೆ ತಾಕೀತು ಮಾಡಲಾಗಿದೆ. ಅಲ್ಲದೆ, ಆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್‌ ಆದೇಶ ಇರುವುದರಿಂದ ಒಂದು ವೇಳೆ ಕಾನೂನು ಸುವ್ಯವಸ್ಥೆಗೆ ಅಡ್ಡಿ ಅಥವಾ ಕಾನೂನಾತ್ಮಕ ಅಡಚಣೆ ಉಂಟಾದಲ್ಲಿ ಅರ್ಜಿದಾರರಿಗೆ ಪರ್ಯಾಯ ಮೈದಾನ ಒದಗಿಸಬೇಕು ಎಂದು ಜಿಲ್ಲಾಡಳಿತಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

    ನಟ ದರ್ಶನ್ ವಿರುದ್ಧ ದೂರು ಕೊಟ್ಟ ಮಹಿಳೆ​: ಹರಿದುಹೋದ ಬಟ್ಟೆ, ಹೊಟ್ಟೆಗೆ ಗಾಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts