More

    ಸವದತ್ತಿ ಯಲ್ಲಮ್ಮ ದೇವಸ್ಥಾನದ ಬಳಿ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ತಡೆ

    ಬೆಂಗಳೂರು: ಬೆಳಗಾವಿ ಜಿಲ್ಲೆ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನದ ಬಳಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬೈಲಹೊಂಗಲದ ಮಹೇಂದ್ರಗೌಡ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೆ ದೇವಾಲಯದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಬಾರದು ಎಂದು ಮಧ್ಯಂತರ ಆದೇಶ ನೀಡಿತು.

    ಅರ್ಜಿದಾರರ ಪರ ವಕೀಲೆ ವಿಜೇತಾ ಆರ್. ನಾಯಕ್ ವಾದ ಮಂಡಿಸಿ, ವಿಜಯನಗರದ ಕೃಷ್ಣದೇವರಾಯರ ಕಾಲದಲ್ಲಿ ನಿರ್ಮಾಣವಾಗಿದೆ ಎನ್ನಲಾದ ಸವದತ್ತಿಯ ಐತಿಹಾಸಿಕ ರೇಣುಕಾ ಯಲ್ಲಮ್ಮ ದೇವಾಲಯವನ್ನು ಪುರಾತತ್ವ ಇಲಾಖೆ ಸಂರಕ್ಷಿತ ಸ್ಮಾರಕ ಎಂದು ಘೋಷಿಸಿದೆ. ನಿಯಮಗಳ ಅನುಸಾರ ಆ ಪ್ರದೇಶದ 100 ಮೀ. ಸುತ್ತಳತೆಯಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಆದರೂ, ನಿಯಮಬಾಹಿರವಾಗಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ದೂರಿದರು.

    ಇದನ್ನೂ ಓದಿ: ಕಿಕ್ಕೇರಿದ ಸುದ್ದಿಗೆ ಸಿಡಿದೆದ್ದ ಬಾಲಿವುಡ್​; ಚಾನೆಲ್-ಆ್ಯಂಕರ್ಸ್​ ವಿರುದ್ಧ ಕೋರ್ಟ್​ಗೆ ದೂರಿತ್ತ ‘ಖಾನ್​​ದಾನ್​’

    ಯಾವುದೇ ಅನುಮತಿ ಪಡೆಯದೆ ದೇವಾಲಯದ ಆಡಳಿತ ಮಂಡಳಿಯೇ ನಿರ್ಮಾಣ ಕಾರ್ಯ ಕೈಗೊಂಡಿದೆ. ಇದು ಪುರಾತತ್ವ ಸ್ಮಾರಕಗಳು ಮತ್ತು ಪ್ರಾಚ್ಯವಸ್ತು ಸ್ಥಳಗಳ ಸಂರಕ್ಷಣಾ ಕಾಯ್ದೆ-1958ರ ಸೆಕ್ಷನ್ 20ಎ ಉಲ್ಲಂಘನೆಯಾಗಿದೆ.ನ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ಮಾ. 3ರಂದು ಪುರಾತತ್ವ ಇಲಾಖೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದರೂ ಕಾಮಗಾರಿ ನಿಲ್ಲಿಸಿಲ್ಲ. ಆದ್ದರಿಂದ, ಕಟ್ಟಡ ನಿರ್ಮಾಣ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಕೋರಿದರು.

    ಸಿ.ಕೆ.ನಾಣು ಪಕ್ಷ ಸಂಘಟನೆ ನಿರ್ಲಕ್ಷಿಸಿದ್ರು ಅಂತ ಕೇರಳ ಜೆಡಿಎಸ್ ಘಟಕವನ್ನೇ ವಜಾಗೊಳಿಸಿದ್ರು ದೇವೇಗೌಡ್ರು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts