More

    ಡಿಸಿಎಂ ಡಿಕೆಶಿಗೆ ತಾತ್ಕಾಲಿಕ ರಿಲೀಫ್​ ಕೊಟ್ಟ ಹೈಕೋರ್ಟ್: ಮೇಲ್ಮನವಿ ವಾಪಾಸ್​ಗೆ ಅನುಮತಿ

    ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆಯನ್ನು ಹಿಂಪಡೆದಿರುವ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್​ ಎತ್ತಿಹಿಡಿದಿದ್ದು, ಡಿಸಿಎಂ ಡಿಕೆಶಿಗೆ ತಾತ್ಕಾಲಿಕ ರಿಲೀಫ್​ ನೀಡಿದೆ.

    ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆ ರದ್ದು ಕೋರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಹಿಂಪಡೆದರು. ರಾಜ್ಯ ಸರ್ಕಾರ ಸಿಬಿಐ ಅನುಮತಿ ಹಿಂಪಡೆದಿರುವ ಹಿನ್ನೆಲೆಯಲ್ಲಿ ಡಿಕೆಶಿ ಮೇಲ್ಮನವಿ ಅರ್ಜಿಯನ್ನು ವಾಪಸ್​ ಪಡೆದಿದ್ದಾರೆ. ಡಿಕೆಶಿ ಪರ ವಕೀಲರ ಮನವಿಯನ್ನು ಪರಿಗಣಿಸಿದ ಹೈಕೋರ್ಟ್​ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ, ಹಿಂಪಡೆಯಲು ಅನುಮತಿ ನೀಡಿತು.

    ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ಡಿಕೆಶಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸುತ್ತಿತ್ತು. ಇಂದಿನ ವಿಚಾರಣೆ ವೇಳೆ, ಅರ್ಜಿದಾರರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲರಾದ ಉದಯ್ ಹೊಳ್ಳ ಮತ್ತು ಅಭಿಷೇಕ್ ಮನು ಸಿಂಫ್ಟಿ, ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುತ್ತಿರುವುದಾಗಿ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿದರು. ಇದರೊಂದಿಗೆ ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾಗಿ, ಅರ್ಜಿದಾರರ ವಿರುದ್ಧ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದಾಗಿ ತಿಳಿಸಿದರು. ಅರ್ಜಿದಾರರ ಪರ ವಾದವನ್ನು ಪುರಷ್ಕರಿಸಿದ ನ್ಯಾಯಾಲಯ ಮೇಲ್ಮನವಿ ಹಿಂಪಡೆಯಲು ಅವಕಾಶ ನೀಡಿತು.

    ಇದೇ ಸಂದರ್ಭದಲ್ಲಿ ಸಿಬಿಐ ತನಿಖೆಗೆ ವಹಿಸಿರುವ ಅನುಮೋದನೆಯನ್ನು ಹಿಂಪಡೆಯಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಿರುವ ವಿಚಾರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮಧ್ಯಪ್ರವೇಶಕ್ಕೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಯತ್ನಾಳ್​ ಮನವಿಯನ್ನು ಪುರಷ್ಕರಿಸಿದ ನ್ಯಾಯಾಲಯ, ಸರ್ಕಾರದ ಕ್ಯಾಬಿನೆಟ್​ ನಿರ್ಧಾರವನ್ನು ಈವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಮತ್ತು ಯತ್ನಾಳ್​ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

    ಗುರುದೇವ ಸಿಂಗ್ ವಿರುದ್ಧದ ಪ್ರಕರಣದಲ್ಲಿ ಪಂಜಾಬ್ ಸರ್ಕಾರದ ನಿರ್ಧಾರ ಉಲ್ಲೇಖಿಸಿ, ಅರ್ಜಿದಾರರು ಮೇಲ್ಮನವಿ ಹಿಂಪಡೆಯಲು ಮನವಿ ಮಾಡಿದ್ದರು. ಇದಕ್ಕೆ ಅನುಮತಿ ನೀಡಿ ಅರ್ಜಿ ಇತ್ಯರ್ಥ ಪಡಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದ್ದು, ಡಿಕೆಶಿಗೆ ತಾತ್ಕಾಲಿಕ ರಿಲೀಫ್​ ಸಿಕ್ಕಂತಾಗಿದೆ.

    ಕರ್ನಾಟಕದಲ್ಲಿ ಚೀನಾದ ಹೊಸ ವೈರಸ್ ಆತಂಕ; ​​ಈ ಸೋಂಕಿನ​ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳು ಇಂತಿವೆ….

    ನಟಿ ಸದಾಗೆ ಸಿನಿಮಾ ಅವಕಾಶಗಳು ಕೈತಪ್ಪಲು ಆಕೆಗಿದ್ದ ಈ ಕೆಟ್ಟ ಚಟವೇ ಕಾರಣವಂತೆ!

    ಭಾರತದಲ್ಲಿ ದಾಖಲೆ ಮಟ್ಟಕ್ಕೆ ತಲುಪಿದ ಚಿನ್ನದ ದರ! ಇಳಿಕೆಯಾಗುತ್ತಾ? ತಜ್ಞರು ಹೇಳೋದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts