More

    5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್​ಗೆ ಕೊನೆಗೂ ಸಿಕ್ತು ಹಸಿರು ನಿಶಾನೆ; ಪರೀಕ್ಷೆ ಯಾವತ್ತು? ಇಲ್ಲಿದೆ ಮಾಹಿತಿ

    ಬೆಂಗಳೂರು: ಕಳೆದ ಕೆಲವು ದಿನಗಳಿಂದ ತಕರಾರಿನಲ್ಲಿದ್ದ 5 ಮತ್ತು 8ನೇ ತರಗತಿಯ ಬೋರ್ಡ್​ ಎಕ್ಸಾಂ ಕುರಿತ ವಿಚಾರ ಕೊನೆಗೂ ಇತ್ಯರ್ಥಗೊಂಡಿದೆ. ಮಾತ್ರವಲ್ಲ, ಯಾವತ್ತು ಪರೀಕ್ಷೆ ನಡೆಸಬೇಕು ಎಂಬ ಕುರಿತು ಕೂಡ ಇಂದು ತೀರ್ಮಾನಗೊಂಡಿದೆ.

    ಐದು ಮತ್ತು ಎಂಟನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ ಏಕಸದಸ್ಯ ಪೀಠ ಮಾ.10ರಂದು ಆದೇಶ ನೀಡಿತ್ತು. ಆದರೆ ಅದನ್ನು ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ಆದರೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡದ ವಿಭಾಗೀಯ ಪೀಠ ಅರ್ಜಿ ವಿಚಾರಣೆಯನ್ನು ಮಾ. 14ಕ್ಕೆ ಮುಂದೂಡಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ವಿಭಾಗೀಯ ಪೀಠದಲ್ಲಿ ಈ ವಿಚಾರ ವಿಚಾರಣೆಗೆ ಬಂದಿತ್ತು.

    ಇದನ್ನೂ ಓದಿ: ಬೆಂಗಳೂರು-ಮೈಸೂರು ಕೆಎಸ್​ಆರ್​ಟಿಸಿ ಪ್ರಯಾಣ ದರ ಹೆಚ್ಚಳ: ದಶಪಥದಲ್ಲಿ ಟೋಲ್ ಸಂಗ್ರಹ ಅಡ್ಡಪರಿಣಾಮ

    ನ್ಯಾ.ನರೇಂದರ್ ಹಾಗೂ ನ್ಯಾ. ಅಶೋಕ್ ಕಿರಣಗಿ ಅವರಿದ್ದ ವಿಭಾಗೀಯ ಪೀಠ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದು, ಅಫಿಡವಿಟ್​ ಸಲ್ಲಿಸುವಂತೆ ಸರ್ಕಾರಕ್ಕೆ ನಿನ್ನೆ ಸೂಚನೆ ನೀಡಿತ್ತು. ಇಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ವಿಚಾರಣೆ ನಡೆದಿದೆ.

    ಇದನ್ನೂ ಓದಿ: ಕಲ್ಯಾಣಮಂಟಪಕ್ಕೂ ಕುಡಿದೇ ಬಂದ ವರ, ಮದುವೆಯೇ ಬೇಡ ಎಂದ ವಧು!

    ಪರೀಕ್ಷೆ ಅಧಿಸೂಚನೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇಂದು ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿದ ವಿಭಾಗೀಯ ಪೀಠ 5 ಮತ್ತು 8ನೇ ತರಗತಿ ಪರೀಕ್ಷೆ ನಡೆಸಲು ಹಸಿರು ನಿಶಾನೆ ತೋರಿದೆ. ಮಾತ್ರವಲ್ಲ, ಮಾ. 27ರಂದು ಪರೀಕ್ಷೆ ನಡೆಸುವಂತೆಯೂ ಸೂಚನೆ ನೀಡಿದ್ದು, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂಬ ನಿರ್ದೇಶನವನ್ನೂ ನೀಡಿದೆ.

    ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts