More

    ಪಟಾಕಿ ನಿಷೇಧಕ್ಕೆ ಹೈಕೋರ್ಟ್ ಒಲವು: 3 ತಿಂಗಳೊಳಗೆ ತೀರ್ಮಾನಿಸುವಂತೆ ಸರ್ಕಾರಕ್ಕೆ ನಿರ್ದೇಶನ

    ಬೆಂಗಳೂರು: ಪರಿಸರ ಹಾಗೂ ಜನರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯದಲ್ಲಿ ಎಲ್ಲ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ 3 ತಿಂಗಳ ಒಳಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

    ಕರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣವಾಗಿ ಪಟಾಕಿ ನಿಷೇಧಿಸುವಂತೆ ಕೋರಿ ನಗರದ ಚಾರ್ಟರ್ಡ್ ಅಕೌಂಟೆಂಟ್ ಡಾ. ಎ.ಎಸ್. ಭರತ್ ವಿಷ್ಣು ಹಾಗೂ ಸಮರ್ಪಣ ಸ್ವಯಂ ಸೇವಾ ಸಂಸ್ಥೆ ಹೈಕೋರ್ಟ್‌ಗೆ ಪ್ರತ್ಯೇಕ ಪಿಐಎಲ್ ಸಲ್ಲಿಸಿದ್ದವು. ಈ ಅರ್ಜಿಗಳನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಪೀಠ, ಪಟಾಕಿ ಮಾರಾಟ ಹಾಗೂ ಬಳಕೆಯನ್ನು ನ್ಯಾಯಾಲಯ ನಿಷೇಧಿಸಲು ಸಾಧ್ಯವಿಲ್ಲ. ಪರಿಸರ ಹಾಗೂ ಜನರ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಪಟಾಕಿಯನ್ನು ನಿಷೇಧಿಸಬಹುದೇ ಎಂಬ ಬಗ್ಗೆ ಸರ್ಕಾರವೇ 3 ತಿಂಗಳ ಒಳಗೆ ತೀರ್ಮಾನ ಕೈಗೊಳ್ಳಬೇಕು ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.

    ಇದನ್ನೂ ಓದಿ: ಬೈಕ್​ನಲ್ಲಿ ಹೋಗುವಾಗ ಪ್ರಿಯಕರನ ಬೆನ್ನಿಗೆ ಇರಿದ ಪ್ರೇಯಸಿ; ಬಿದ್ದರೂ ಬಿಡದೆ ಮತ್ತೆ ಮತ್ತೆ ಇರಿದು ಸಾಯಿಸಿದಳು!

    ಹೈಕೋರ್ಟ್ ಹೇಳಿದ್ದೇನು?: ಹಬ್ಬಗಳು, ಸಮಾರಂಭಗಳು, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವ ಮೂಲಕ ಜನ ತಮ್ಮ ಭಾವನೆ ವ್ಯಕ್ತಪಡಿಸುತ್ತಾರೆ. ಆದರೆ, ಅಂತಿಮವಾಗಿ ಇವೆಲ್ಲವೂ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತವೆ. ಪಟಾಕಿಗಳನ್ನು ಸಿಡಿಸುವುದರಿಂದ ಶಬ್ದ ಮಾಲಿನ್ಯ, ವಾಯ ಮಾಲಿನ್ಯ ಹೆಚ್ಚಾಗುವ ಜತೆಗೆ, ಜನರಿಗೂ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಪಟಾಕಿ ನಿಷೇಧಿಸುವ ಬಗ್ಗೆ ಚರ್ಚೆ ಮಾಡುತ್ತ ಕೂರುವ ಬದಲಿಗೆ ಸದ್ಯದ ಕೋವಿಡ್ ಸಂದರ್ಭವನ್ನೇ ಗಮನದಲ್ಲಿಟ್ಟುಕೊಂಡು ಪಟಾಕಿ ಬಳಕೆಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಕೇವಲ ಸರ್ಕಾರವಷ್ಟೇ ಅಲ್ಲದೆ ಸಾರ್ವಜನಿಕರೂ ಈ ವಿಚಾರದಲ್ಲಿ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

    ಕಾಲೇಜ್ ಗ್ರೂಪ್‌ನಲ್ಲಿ ಸಿಕ್ಕ ಹುಡುಗಿಯರ ನಂಬರ್‌ಗೆ ವಿದ್ಯಾರ್ಥಿಗಳ ವೈಯಕ್ತಿಕ ಮೆಸೇಜ್!

    ‘ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ..’ ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ತಾಯಿ!

    ಶಾಸಕಿ ಮೇಲೆ ಬಿತ್ತು ಪೊಲೀಸ್ ಕೇಸ್; ಹಲ್ಲೆ ಮಾಡಿದ್ದಕ್ಕೆ ಎಫ್​ಐಆರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts