More

    ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಕೆಪಿಎಸ್ಸಿಗೆ ಹೈಕೋರ್ಟ್ ನೋಟಿಸ್

    ಬೆಂಗಳೂರು : ಬಿಬಿಎಂಪಿಯಲ್ಲಿ ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿ ಆದೇಶಿಸಿದೆ.

    ನಗರದಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಸರ್ಕಾರ ಹಾಗೂ ಬಿಬಿಎಂಪಿಗೆ ಅಗತ್ಯ ನಿರ್ದೇಶನ ನೀಡುವ ಸಲುವಾಗಿ ನ್ಯಾಯಪೀಠ ಸ್ವಯಂ ಪ್ರೇರಿತ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿತು.

    ವಿಚಾರಣೆ ವೇಳೆ ಪ್ರಕರಣದ ಅಮಿಕಸ್ ಕ್ಯೂರಿ ಆಗಿರುವ ಹಿರಿಯ ವಕೀಲ ಪ್ರಮೋದ್ ಎನ್.ಕಟಾವಿ, ಕಾಲಮಿತಿಯೊಳಗೆ ಇಂಜಿನಿಯರ್ ಹುದ್ದೆ ಭರ್ತಿ ಮಾಡುವಂತೆ ಹೈಕೋರ್ಟ್ ನಿರ್ದೇಶಿಸಿತ್ತು. ಆದರೆ, ಇದುವರೆಗೂ ಬಿಬಿಎಂಪಿ ನೇಮಕಾತಿ ಮಾಡಿದೆಯೋ ಅಥವಾ ಇಲ್ಲವೋ ಎನ್ನುವುದರ ಬಗ್ಗೆ ತಿಳಿದಿಲ್ಲ ಎಂದು ಪೀಠದ ಗಮನಕ್ಕೆ ತಂದರು

    ಬಿಬಿಎಂಪಿ ಪರ ವಕೀಲ ಹಾಜರಾಗಿ, 92 ಸಿವಿಲ್ ಎಂಜಿನಿಯರ್ ಹುದ್ದೆಗೆ ಭರ್ತಿ ಮಾಡಲು ಕೆಪಿಎಸ್‌ಸಿಗೆ ಬಿಬಿಎಂಪಿ ಕೋರಿದೆ. ಕೆಪಿಎಸ್‌ಸಿಗೆ ನೇಮಕಕ್ಕೆ ಅರ್ಜಿ ಆಹ್ವಾನಿಸಿ 2024ರ ಮಾ.13ರಂದು ಅಧಿಸೂಚನೆ ಸಹ ಹೊರಡಿಸಿದೆ. ಅಧಿಸೂಚನೆಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸಲಾಗುವುದು ಎಂದು ಕೋರಿದರು.

    ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದಿಕ್ಷಿತ್ ಅವರು, ಇಂಜಿನಿಯರ್ ಹುದ್ದೆಗಳ ನೇಮಕಾತಿ ಸೂಚಿಸಿ 2023ರ ಅ.9ರಂದು ಹೈಕೋರ್ಟ್ ಗಂಭೀರ ಆದೇಶ ಮಾಡಿದೆ. ಆದರೆ, ಬಿಬಿಎಂಪಿ ಬಳಿ ಈಗ ನೋಟಿಫಿಕೇಷನ್ ಇಲ್ಲ ಎಂದು ಹೇಳುತ್ತಿದ್ದೀರಿ. ನೋಟಿಫಿಕೇಷನ್ ಸೇರಿದಂತೆ ಎಲ್ಲ ವಿವರಗಳನ್ನು ಪೀಠಕ್ಕೆ ಸಲ್ಲಿಸಬೇಕು. ಸಲ್ಲಿಸದೆ ಹೋದರೆ ನ್ಯಾಯಾಲಯ ಪದೇ ಪದೇ ಆದೇಶ ಹೊರಡಿಸಬೇಕಾಗಿರುತ್ತದೆ. ಅದರಿಂದ ನ್ಯಾಯಾಲಯದ ಸಮಯವ್ಯರ್ಥ್ಯಾವಾದಂತೆ ಎಂದು ಅಸಮಾಧಾನ ಹೊರ ಹಾಕಿದರು.

    ಈ ವೇಳೆ ಬಿಬಿಎಂಪಿ ಪರ ವಕೀಲರು, ಹೈಕೋರ್ಟ್ ಆದೇಶ ಹೊರಡಿಸಿದ ಕೂಡಲೇ ಕೆಪಿಎಸ್‌ಸಿಗೆ ಪಾಲಿಕೆ ಮಾಹಿತಿ ನೀಡಿದೆ. ಕೆಪಿಎಸ್‌ಸಿ ಅಹ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಕೆಪಿಎಸ್‌ಸಿಯೇ ನೇಮಕ ಪ್ರಕ್ರಿಯೆ ನಡೆಸಬೇಕಿದೆ. ಈ ಅರ್ಜಿಯಲ್ಲಿ ಅದು ಪ್ರತಿವಾದಿಯಾಗಿಲ್ಲ. ನಮಗಿರುವ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸಲಾಗುತ್ತಿದೆ ಎಂದು ಸಮರ್ಥನೆ ಮಾಡಿಕೊಂಡರು .

    ಅದನ್ನು ಪರಿಗಣಿಸಿದ ಹೈಕೋರ್ಟ್, ಅರ್ಜಿಯಲ್ಲಿ ಕೆಪಿಎಸ್‌ಸಿ ಅನ್ನು ಪ್ರತಿವಾದಿ ಮಾಡಿ, ನೋಟಿಸ್ ಜಾರಿಗೊಳಿಸಿತು ಅಲ್ಲದೆ, ಹಿಂದಿನ ಆದೇಶ ಪಾಲಿಸುವ ನಿಟ್ಟಿನಲ್ಲಿ ಬಿಬಿಎಂಪಿ ಸಿವಿಲ್ ಎಂಜಿನಿಯರ್ ನೇಮಕಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಬೇಕು ಎಂದು ಕೆಪಿಎಸ್‌ಸಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts