More

    ರಾಕ್​​ಲೈನ್ ಒಡೆತನದ ಮಾಲ್‌ನ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ

    ಬೆಂಗಳೂರು: ಟ್ಯಾಕ್ಸ್ ಕಟ್ಟುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಚಿತ್ರ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮಾಲಕತ್ವದ ರಾಕ್​​ಲೈನ್ ಮಾಲ್ ಬೀಗಮುದ್ರೆ ಜಡಿದಿದ್ದರು. ಈಗ ಬೀಗ ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ.

    11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ಮಾಲ್​ಗೆ ಅಧಿಕಾರಿಗಳು ಬೀಗ ಹಾಕಿದ್ದರು. 2011 ರಿಂದ 2023ರವರೆಗೆ 11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್ ನೀಡಿಯೂ ಬಾಕಿ ಪಾವತಿಸದ ಹಿನ್ನೆಲೆ ಮಾಲ್​​ಗೆ ಬೀಗ ಹಾಕಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಕ್​ಲೈನ್ ಮಾಲ್ ಮ್ಯಾನೇಜರ್ ಪ್ರಕಾಶ್, ನಮಗೆ ನೋಟಿಸ್ ಕೊಡದೇ ಮಾಲ್​ಗೆ ಬೀಗ ಹಾಕಿದ್ದಾರೆ ಎಂದು ಹೇಳಿದ್ದರು.

    ಬಿಬಿಎಂಪಿ ಆದೇಶ ಪ್ರಶ್ನಿಸಿ ರಾಕ್​ಲೈನ್ ವೆಂಕಟೇಶ್​ ಅವರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts