More

    ಕೆಆರ್‌ಎಸ್‌ ಸುತ್ತ 30 ಕಿಮೀ ವ್ಯಾಪ್ತೀಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್‌ ತೀರ್ಪು

    ಬೆಂಗಳೂರು: ರಾಜ್ಯದ ಜೀವನಾಡಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕೆಆರ್‌ಎಸ್‌ ಅಣೆಕಟ್ಟೆಯ ಸುತ್ತ 30 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

    ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ – ಶಿಕ್ಷಣ ಸಂಸ್ಥೆಗಳಿಗೆ ರಜೆ

    ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಕೆಆರ್‌ಎಸ್ ಸುತ್ತ 30 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸುವಂತಿಲ್ಲ. ಸರ್ಕಾರ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ. ಹೀಗಾಗಿ ಯಾವುದೇ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ನ್ಯಾಯಾಲಯ ಹೇಳಿದೆ. ಜಿಲ್ಲಾಧಿಕಾರಿ ಪರವಾನಿಗೆ ನೀಡಲು ಷರತ್ತು ವಿಧಿಸಿದ್ದಾರೆ ಎಂದು ಕೆಲ ಗಣಿ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು.

    ಅಣೆಕಟ್ಟಿಗೆ ಐತಿಹಾಸಿಕ ಮೌಲ್ಯವಿದೆ. ಮೈಸೂರು ಮಹಾರಾಜರು, ಸರ್ ಎಂ. ವಿಶ್ವೇಶ್ವರಯ್ಯರ ಕೊಡುಗೆ ಬಹಳಷ್ಟಿದೆ. ಅಣೆಕಟ್ಟೆ ಬಳಿ ಹಲವು ಬಾರಿ ಸ್ಫೋಟಕಗಳನ್ನು ಸಿಡಿಸಲಾಗುತ್ತಿದೆ. ಅಲ್ಲಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮ ಎದುರಾಗಲಿದೆ ಎಂದು ನ್ಯಾಯಾಲಯ ಹೇಳಿದೆ.
    ಇನ್ನು ಕೆಆರ್ ಎಸ್ ಗೆ ತೊಂದರೆಯಾದರೆ ಆಗುವ ಅನಾಹುತಗಳ ಬಗ್ಗೆ ಅರಿವಿದೆಯೇ? ಒಂದು ವೇಳೆ ಅನಾಹುತವಾದರೆ ಇಡೀ ರಾಜ್ಯಕ್ಕೇ ಗಂಭೀರ ಆಪತ್ತು ಬರಲಿದೆ. ಹೀಗಾಗಿ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

    ಕೃಷ್ಣರಾಜಸಾಗರ ಅಣೆಕಟ್ಟು ನಿರ್ಮಾಣಕ್ಕೆ ಜನರು ರಕ್ತ, ಬೆವರು ಹರಿಸಿದ್ದಾರೆ. ಅದಕ್ಕೆ ಧಕ್ಕೆಯಾಗುವ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ. ಮೂರು ರಾಜ್ಯಗಳು ಕಾವೇರಿ ನೀರಿಗಾಗಿ ಹೋರಾಡುತ್ತಿವೆ. ಆದರೆ ಕೆಆರ್​ಎಸ್ ಅಣೆಕಟ್ಟೆ ಸಂರಕ್ಷಣೆಗೆ ಪ್ರಯತ್ನಿಸುತ್ತಿಲ್ಲ. ಅಣೆಕಟ್ಟೆಗೆ ತೊಂದರೆಯಾದರೆ ಇಡೀ ರಾಜ್ಯಕ್ಕೇ ಗಂಭೀರ ಆಪತ್ತು ಬರಲಿದೆ. ಹೀಗಾಗಿ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸುವುದು ಅನಿವಾರ್ಯಎಂದು ನ್ಯಾಯಪೀಠ ಹೇಳಿದೆ.

    ಸರ್ಕಾರಕ್ಕೆ ವರದಿ: ವಿಶ್ವವಿಖ್ಯಾತ ಕೃಷ್ಣರಾಜಸಾಗರ ಅಣೆಕಟ್ಟೆಯ 25 ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಗಣಿ ಚಟುವಟಿಕೆಗಳನ್ನು ನಿಷೇಧಿಸುವಂತೆ ಅಣೆಕಟ್ಟು ಸುರಕ್ಷತಾ ಪುನರ್ ಪರಿಶೀಲನಾ ಸಮಿತಿ 2021ರ ಡಿಸೆಂಬರ್‌ನಲ್ಲಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿತ್ತು.

    ಹೊಲದಲ್ಲಿ ಹತ್ತಿ ಕೀಳುತ್ತಿದ್ದಾಗ ಹುಲಿ ದಾಳಿ: ಮಹಿಳೆ ಮೃತ್ಯು..ಎಲ್ಲಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts