More

    ಪಿಎಸ್​ಐ ನೇಮಕಾತಿ ಹಗರಣ: ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

    ಬೆಂಗಳೂರು: ಪಿಎಸ್​ಐ ಮರು ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಆದೇಶ​ ನೀಡಿದೆ. ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ. ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಮರು ಪರೀಕ್ಷೆಯ ಸರ್ಕಾರ ನೀಡಿದ ಆದೇಶವನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಪೀಠ ಈ ಆದೇಶ ನೀಡಿದೆ.

    ಅಕ್ಟೋಬರ್‌ 26ಕ್ಕೆ ವಿಚಾರಣೆ ಪೂರ್ಣಗೊಳಿಸಿದ್ದ‌ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮರುಪರೀಕ್ಷೆಗೆ ಬಿಜೆಪಿ ಸರ್ಕಾರ 2022 ಏಪ್ರಿಲ್ 29 ರಂದು ಆದೇಶ ನೀಡಿತ್ತು. ಈ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ‌ ಅಭ್ಯರ್ಥಿಗಳು ಕೆಎಟಿ ಅರ್ಜಿ ಸಲ್ಲಿಸಿದ್ದರು. ಕೆಎಟಿ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿ ವಜಾಗೊಳಿಸಿತ್ತು. ಬಳಿಕ ಅಭ್ಯರ್ಥಿಗಳು ಮೇಲ್ಮನವಿ ಅರ್ಜಿಯನ್ನ ಹೈ ಕೋರ್ಟ್ ನಲ್ಲಿ ಸಲ್ಲಿಸಿದ್ದರು.

    ಜನವರಿ 21, 2021 ರಂದು ಕರ್ನಾಟಕ ಪೊಲೀಸ್‌ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕಟವಾಗಿತ್ತು. ಅದೇ ವರ್ಷ ಅಕ್ಟೋಬರ್‌ 3 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿಯ ಲಿಖಿತ ಪರೀಕ್ಷೆ ನಡೆಸಲಾಯಿತು. ಆದರೆ ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಭೇಟಿಯಾಗಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಅಭ್ಯರ್ಥಿಗಳು ದೂರು ನೀಡಿದರು. 2022, ಜನವರಿ 18ರಂದು 545 ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾದಾಗ ಆಯ್ಕೆ ಪಟ್ಟಿ ತಡೆಗೆ ನೇಮಕಾತಿ ವಿಭಾಗದ ಎಡಿಐಜಿ ಸೂಚನೆ ನೀಡಿದರು.

    ಆ ನಂತರ ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಅಕ್ರಮದ ತನಿಖೆ ಸಿಐಡಿಗೆ ವರ್ಗಾಯಿಸಲಾಯಿತು. ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ವೀರೇಶ್ ನನ್ನು ಮೊದಲು ಬಂಧಿಸಲಾಯಿತು. ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿ ಐವರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಯಿತು.

    ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ; ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸಿ ಕರ್ತವ್ಯ ನಿಷ್ಠೆ ಮೆರೆದ ಮುಂಬೈ ಪೊಲೀಸರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts