ಪಾಕಿಸ್ತಾನದ ತಂದೆ-ಭಾರತದ ತಾಯಿಗೆ ದುಬೈನಲ್ಲಿ 2 ಮಕ್ಕಳು ಜನನ | ಭಾರತದ ಪೌರತ್ವ ಕೋರಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

blank

ಬೆಂಗಳೂರು: ಪಾಕಿಸ್ತಾನದ ತಂದೆ ಮತ್ತು ಭಾರತದ ತಾಯಿಗೆ ದುಬೈನಲ್ಲಿ ಜನಿಸಿರುವ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಭಾರತದ ಪೌರತ್ವ ನೀಡುವಂತೆ, ತಾಯಿ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಭಾರತದ ಪೌರತ್ವ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನಲ್ಲಿ ನೆಲೆಸಿರುವ 17 ಮತ್ತು 14 ವರ್ಷದ ಇಬ್ಬರು ಪಾಕಿಸ್ತಾನದ (ಅಪ್ರಾಪ್ತ ಮಕ್ಕಳು) ಅಪ್ರಾಪ್ತ ಮಕ್ಕಳು ಜಂಟಿಯಾಗಿ ತಮ್ಮ ತಾಯಿ ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಆದೇಶಿಸಿದೆ.

ಪೌರತ್ವವನ್ನು ತ್ಯಜಿಸಲು 21 ವರ್ಷ ವಯಸ್ಸಾಗಬೇಕು ಎಂದು ಪಾಕಿಸ್ತಾನ ದೇಶದ ನಿಯಮವಿದೆ. ಹಾಗಾಗಿ, ಅರ್ಜಿದಾರರು ಭಾರತದ ಕಾನೂನುಗಳು ಹೊಂದಿಕೊಳ್ಳಲು ಸಾಧ್ಯವಿಲ್ಲ. ಪಾಕಿಸ್ತಾನದ ಪೌರತ್ವವನ್ನು ತ್ಯಜಿಸಿದ ಬಳಿಕವೇ ಅರ್ಜಿದಾರರು ಭಾರತದ ಪೌರತ್ವ ಕೋರಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ಆದೇಶದಲ್ಲಿ ನಿರ್ದೇಶಿಸಿದೆ.

ಇದನ್ನೂ ಓದಿ: ವಿಜಯಪುರ | 70 ಅಡಿ ಎತ್ತರದ ರಥದ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು

ಭಾರತ ಮೂಲದ ಅಮೀನಾ, ದುಬೈನಲ್ಲಿರುವ ಪಾಕಿಸ್ತಾನದ ಪ್ರಜೆ ಅಸ್ಸಾದ್ ಮಲ್ಲಿಕ್ ಎಂಬುವರನ್ನು 2002ರಲ್ಲಿ ಷರಿಯಾ ಕಾನೂನಿನ ಪ್ರಕಾರ ವಿವಾಹವಾಗಿದ್ದರು. ದಂಪತಿಗೆ ದುಬೈನಲ್ಲಿಯೇ ಇಬ್ಬರು ಮಕ್ಕಳು ಜನಿಸಿದ್ದರು. ನಂತರ ಈ ದಂಪತಿ ದುಬೈ ನ್ಯಾಯಾಲಯದಲ್ಲಿ ಪರಸ್ಪರ ಒಪ್ಪಿಕೊಂಡು ವಿಚ್ಛೇದನ ಪಡೆದಿದ್ದರು. ಜತೆಗೆ, ಮಕ್ಕಳ ಮೇಲಿನ ಹಕ್ಕನ್ನು ತಾಯಿಗೆ (ಅಮೀನಾ) ಬಿಟ್ಟುಕೊಡಲಾಗಿತ್ತು. ಈ ಮಕ್ಕಳು ದುಬೈನಲ್ಲಿ ಉದ್ಯೋಗದಲ್ಲಿದ್ದ ತಾಯಿಯೊಂದಿಗೆ ನೆಲೆಸಿದ್ದರು.

ಆದರೆ, ದುಬೈನಲ್ಲಿ ಜೀವನ ನಡೆಸಲು ಅಸಾಧ್ಯವಾದ ಕಾರಣ ಅಮೀನಾ ಅವರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿದ್ದ ತನ್ನ ಪೋಷಕರ ಮನೆಗೆ 2021ರಲ್ಲಿ ಹಿಂದಿರುಗಲು ನಿರ್ಧರಿಸಿದರು. ಮಕ್ಕಳು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅಲ್ಲಿಯ ಪಾಸ್‌ಪೋರ್ಟ್ ಹೊಂದಿರುವ ಕಾರಣ ಭಾರತಕ್ಕೆ ಕರೆತರಲು ಅನುಮತಿ ಕೋರಿ ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಕಾರಿನಲ್ಲಿ ವ್ಯಕ್ತಿ ಸಜೀವ ದಹನ ಪ್ರಕರಣ; ಅರ್ಧ ಸುಟ್ಟ ಒಳ ಉಡುಪಿನಿಂದ ಪತ್ತೆಯಾಯ್ತು ಮೃತ ವ್ಯಕ್ತಿಯ ಗುರುತು!

ಮನವಿ ಪರಿಗಣಿಸಿದ್ದ ಭಾರತದ ರಾಯಭಾರ ಕಚೇರಿಯ ಅಧಿಕಾರಿಗಳು, ಪಾಕಿಸ್ತಾನದ ಪಾಸ್‌ಪೋರ್ಟ್‌ನ್ನು ಹಿಂದಿರುಗಿಸಿದ ಬಳಿಕ ಅವರ ಪೌರತ್ವದ ಕುರಿತು ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಷರತ್ತು ವಿಧಿಸಿ ಮಾನವೀಯತೆ ದೃಷ್ಠಿಯಿಂದ ತಾತ್ಕಾಲಿಕವಾಗಿ ಭಾರತ ಬರಲು 2021ರ ಮೇ 31ರಂದು ಪಾಸ್‌ಪೋರ್ಟ್ ನೀಡಿದ್ದರು.

ದುಬೈನಲ್ಲಿರುವ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನದ ರಾಯಭಾರಿ ಕಚೇರಿಯ ಅಧಿಕಾರಿಗಳು, ಇಬ್ಬರು ಅಪ್ರಾಪ್ತರಿಗೆ ಭಾರತದ ಪೌರತ್ವ ನೀಡುವುದಕ್ಕೆ ನಮಗೆ ಅಡ್ಡಿಯಿಲ್ಲ. ಆದರೆ, ಪಾಕಿಸ್ತಾನ ಪೌರತ್ವ ಕಾಯ್ದೆ ಪ್ರಕಾರ ಪಾಕಿಸ್ತಾನದ ಪೌರತ್ವ ತ್ಯಜಿಸಬೇಕಾದರೆ 21 ವರ್ಷ ವಯಸ್ಸಾಗಿರುವುದು ಕಡ್ಡಾಯ. ಅದರಂತೆ ಮಕ್ಕಳಿಗೆ 21 ವರ್ಷ ವಯಸ್ಸಾಗುವವರೆಗೂ ಪೌರತ್ವ ತ್ಯಜಿಸಲು ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಅಮೀನಾ ತನ್ನಿಬ್ಬರು ಮಕ್ಕಳಿಗೆ ಭಾರತದ ಪೌರತ್ವ ನೀಡುವಂತೆ ಕೇಂದ್ರ ಗೃಹ ಇಲಾಖೆಗೆ 2022ರ ಮೇ 5ರಂದು ಪತ್ರ ಬರೆದು ಕೋರಿದ್ದರು. ಅದಕ್ಕೆ ಕೇಂದ್ರ ಗೃಹ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಜುಲೈನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಅಮೀನಾ, ತನ್ನ ಮಕ್ಕಳಿಗೆ ಭಾರತದ ಪೌರತ್ವ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದರು. ಈ ಅರ್ಜಿ ವಿಚಾರಣಾ ಹಂತದಲ್ಲಿರುವಾಗಲೇ 2022ರ ಸೆಪ್ಟೆಂಬರ್‌ನಲ್ಲಿ ಅಮೀನಾ ಮನವಿಯನ್ನು ತಿರಸ್ಕರಿಸಿ ಗೃಹ ಸಚಿವಾಲಯ ಆದೇಶಿಸಿತ್ತು. ಇದೀಗ ಹೈಕೋರ್ಟ್ ಸಹ ಅಮೀನಾ ಮತ್ತವರ ಅಪ್ರಾಪ್ತ ಮಕ್ಕಳ ಮನವಿ ತಿರಸ್ಕರಿಸಿದೆ.

ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ!

Share This Article

ಬ್ರೆಡ್​​ ಇಲ್ಲದೆ ಮನೆಯಲ್ಲೇ ಮಾಡಿ ಸ್ಯಾಂಡ್ವಿಚ್​; ಇಲ್ಲಿದೆ ಸಿಂಪಲ್​ ವಿಧಾನ | Recipe

ತ್ವರಿತ ಉಪಹಾರಕ್ಕಾಗಿ ಸ್ಯಾಂಡ್ವಿಚ್ ಮಾಡುವುದು ಜನರ ಮೊದಲ ಆಯ್ಕೆಯಾಗಿದೆ. ಮಕ್ಕಳು ಟಿಫಿನ್ ಮುಗಿಸಿ ಅದೇ ಟಿಫಿನ್…

ಒಣದ್ರಾಕ್ಷಿಯಿಂದಾಗುವ ಆರೋಗ್ಯ ಪ್ರಯೋಜನ ಗೊತ್ತಿದೆ; ಮನೆಯಲ್ಲೇ Dry Grapes ತಯಾರಿಸುವ ವಿಧಾನ ಇಲ್ಲಿದೆ | Recipe

ಒಣದ್ರಾಕ್ಷಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆದರೆ ಒಣದ್ರಾಕ್ಷಿಯಲ್ಲಿ ಯಾವುದೇ ಕಲಬೆರಕೆ ಇಲ್ಲಿದಿದ್ದಾಗ ಮಾತ್ರ ಈ ಪ್ರಯೋಜನ…

ಬಹಳ ಇಷ್ಟಪಟ್ಟು ಪನೀರ್​ ಸೇವಿಸುತ್ತಿದ್ದೀರಾ; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ವಿಷಯ ಇದು.. | Health Tips

ನಾನ್​ವೆಜ್​​​​​​ ಇಷ್ಟಪಡದವರು ಪ್ರೋಟೀನ್​ಗಾಗಿ ಪನೀರ್​​​​ ಅನ್ನು ಹೆಚ್ಚು ಸೇವಿಸುತ್ತಾರೆ. ಆದರೆ ಇದು ನಿಜವಾಗಿಯೂ ಪ್ರೋಟೀನ್‌ಗೆ ಉತ್ತಮವಾದ…