More

    ಜೈಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಷ್ಟವಾಗಿದ್ದಕ್ಕೆ ಇಬ್ಬರು ಮಹಿಳಾ ಕೈದಿಗಳಿಗೆ ಜಾಮೀನು

    ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ಜೈಲಿನಲ್ಲಿ ಕೈದಿಗಳ ನಡುವೆ ಅಂತರ ಕಾಪಾಡುವುದು ಕಷ್ಟವಾಗುವ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಮಹಿಳೆಯರಿಬ್ಬರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

    ಚಿಕ್ಕಬಳ್ಳಾಪುರದ ಅನಸೂಯಮ್ಮ ಹಾಗೂ ದ್ಯಾವಮ್ಮ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, 50 ಸಾವಿರ ರೂ. ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಶ್ಯೂರಿಟಿ ಒದಗಿಸಬೇಕು. ಸಾಕ್ಷ್ಯ ನಾಶಪಡಿಸುವ ಯತ್ನ ಮಾಡಬಾರದು, 2 ವಾರಕ್ಕೊಮ್ಮೆ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು, ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಪ್ಪದೆ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

    ಅರ್ಜಿದಾರರ ವಿರುದ್ಧ ಕೊಲೆ ಹಾಗೂ ಸಾಕ್ಷ್ಯ ನಾಶಪಡಿಸಿದ ಪ್ರಕರಣ ದಾಖಲಿಸಲಾಗಿದೆ. ಆದರೆ,ಕೊಲೆ ನಡೆದ ಸಂದರ್ಭದಲ್ಲಿ ಮನೆಯ ಗೋಡೆ ಹಾಗೂ ನೆಲದ ಮೇಲಿದ್ದ ಮೃತರ ರಕ್ತದ ಕಲೆಗಳನ್ನು ತೊಳೆದು ಸಾಕ್ಷ್ಯ ನಾಶಪಡಿಸಿದ್ದಾರೆ ಅವರ ವಿರುದ್ಧ ಆರೋಪ ಮಾಡಲಾಗಿದೆ. ಈ ಹಂತದಲ್ಲಿ ಅರ್ಜಿದಾರರ ವಿರುದ್ಧ ಸಾಕ್ಷ್ಯ ನಾಶಪಡಿಸಿದ ಆರೋಪ ಮಾತ್ರ ಹೊರಿಸಬಹುದಾಗಿದೆ. ಆರೋಪಿಗಳು ಮಹಿಳೆಯರಾಗಿದ್ದು, ಗೌರವಯುತ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೇಲಾಗಿ ಕೋವಿಡ್-19 ಸಂದರ್ಭದಲ್ಲಿ ಜೈಲಿನಲ್ಲಿರುವ ಸಹ ಕೈದಿಗಳ ಜತೆ ಅಂತರ ಕಾಯ್ದುಕೊಳ್ಳುವುದು ಸ್ವಲ್ಪ ಕಷ್ಟವಾಗಬಹುದು ಎಂದು ಅಭಿಪ್ರಾಯಪಟ್ಟು, ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.

    ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ ಬೆನ್ನಲ್ಲೇ ಮಹಿಳೆ ಆಕೆಯ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

    ಪಾಕಿಸ್ತಾನ ಜಿಂದಾಬಾದ್ ಎಂದಿದ್ದ ಕಾಶ್ಮೀರಿಗಳಿಗೆ ಜಾಮೀನು ಸಿಗಲು ನಮ್ಮ ಪೊಲೀಸರು ಕಾರಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts