ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಆರೋಪ: ಸಿಎಂ ಸಿದ್ದುಗೆ ಹೈಕೋರ್ಟ್​ ನೋಟಿಸ್​

Siddaramaiah
Published on

ಬೆಂಗಳೂರು: ಕಾಂಗ್ರೆಸ್​ ಪಕ್ಷವು ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿದೆ. ಇದು ಕಾನೂನು ಬಾಹಿರ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಸಿದ್ದರಾಮಯ್ಯ ಅವರಿಗೆ ಇಂದು (ಜುಲೈ 28) ನೋಟಿಸ್​ ಜಾರಿ ಮಾಡಿದೆ.

ಕಾಂಗ್ರೆಸ್ ಪಕ್ಷ ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷವೊಡ್ಡಿ ಚುನಾವಣೆಯಲ್ಲಿ ಗೆದ್ದಿದೆ. ಆದರೆ, ಪ್ರಜಾಪ್ರತಿನಿಧಿ ಕಾಯ್ದೆ ಸೆ.123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಇದು ಕಾನೂನಿಗೆ ವಿರುದ್ಧವಾಗಿದ್ದು, ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿ ಎಂದು ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ನೋಟಿಸ್​ ನೀಡಿ ವಿವರಣೆ ಕೇಳಿದೆ. ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 1ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ವಿರೋಧ

ಈ ಹಿಂದೆ ವಿಚಾರ ಸಂಕೀರಣವೊಂದರಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ರಾಜ್ಯ ಸರ್ಕಾರ ನೀಡಿರುವ ಫ್ರೀ ಗ್ಯಾರಂಟಿ ಯೋಜನೆಯ ಪರಿಣಾಮ ಆರು ತಿಂಗಳಲ್ಲಿ ತಿಳಿಯುತ್ತದೆ. ಮಹಿಳೆಯರು ಫ್ರೀ ಬಸ್‌ನಲ್ಲಿ ಹೊರಟರೇ ಗಂಡಸರು ಮತ್ತೊಂದು ಬಸ್‌ನಲ್ಲಿ ಹೊರಡಬಹುದು ಎನ್ನಿಸುತ್ತದೆ. ಅತ್ತೆ ಮತ್ತು ಸೊಸೆ ನಡುವೆ ಜಗಳ ಕೂಡ ಆಗಬಹುದು. ಆರ್ಥಿಕ ಪರಿಸ್ಥಿತಿ ಬಹಳ ಗಂಭೀರವಾಗಬಹುದು. ಈಗಾಗಲೇ ವಿದ್ಯುತ್ ಬಿಲ್ ಜಾಸ್ತಿ ಮಾಡಿದ್ದಾರೆ. ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಫ್ರೀ ಯೋಜನೆ, ಬಿಟ್ಟಿ ಕೊಡುವುದು ನನ್ನ ಪ್ರಕಾರ ಲಂಚ ಎಂದಿದ್ದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net