More

    ಆಸ್ತಿ ವಿವರ ಸಲ್ಲಿಸದಿದ್ದರೆ ಬಿಬಿಎಂಪಿ ಸದಸ್ಯ ಸ್ಥಾನಕ್ಕೆ ಸಂಚಕಾರ

    ಬೆಂಗಳೂರು: ನಿಯಮದಂತೆ ಪ್ರತಿ ವರ್ಷ ತಮ್ಮ ಆಸ್ತಿ ಹಾಗೂ ಸಾಲದ ವಿವರ ಸಲ್ಲಿಸದ ಬಿಬಿಎಂಪಿ ಸದಸ್ಯರನ್ನು ಅನರ್ಹಗೊಳಿಸುವುದಾಗಿ ಹೈಕೋರ್ಟ್ ಮೌಖಿಕ ಎಚ್ಚರಿಕೆ ನೀಡಿದೆ. ಪಾಲಿಕೆಯ 34 ಸದಸ್ಯರು ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿ ಮತ್ತು ಸಾಲದ ವಿವರಗಳನ್ನು ಮೇಯರ್​ಗೆ ಒದಗಿಸಿಲ್ಲ ಎಂದು ಆರೋಪಿಸಿ ಅನಿಲ್​ಕುಮಾರ್ ಶೆಟ್ಟಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿತು.

    ಕೆಎಂಸಿ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಪಾಲಿಕೆ ಸದಸ್ಯರು ಪ್ರತಿ ವರ್ಷ ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿ ಮತ್ತು ಸಾಲದ ವಿವರ ಒದಗಿಸುವುದು ಕಡ್ಡಾಯ. ಆದರೆ, ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಕೆಲ ಸದಸ್ಯರು ವಿಫಲರಾಗಿದ್ದಾರೆ. ಅಂಥವರನ್ನು ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿತು.

    ಪ್ರತಿವಾದಿಗಳಾಗಿರುವ 34 ಪಾಲಿಕೆ ಸದಸ್ಯರು ಆಸ್ತಿ ವಿವರ ಒದಗಿಸಿರುವ ಕುರಿತ ದಾಖಲೆಗಳು ಹಾಗೂ ವಿವರಣೆಗಳನ್ನು ವಾರದೊಳಗೆ ಬಿಬಿಎಂಪಿ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಬೇಕು. ತಪ್ಪಿದಲ್ಲಿ, ಆ ಎಲ್ಲ ಸದಸ್ಯರನ್ನು ಅನರ್ಹಗೊಳಿಸಲು ತೀರ್ಪು ಹೊರಡಿಸಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.

    ರಸ್ತೆ-ಮನೆಯಲ್ಲೇ ಕರೊನಾ ಮರಣಮೃದಂಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts