More

    ಡೇರಾಗೆ ಮೂರು ತಿಂಗಳ ಕಾಲಮಿತಿ ಹೈಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರ

    ಬೆಂಗಳೂರು: ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ಸಂಗ್ರಹಿಸಿದ ಬಗ್ಗೆ ಖಾಸಗಿ ಶಾಲೆಗಳ ವಿರುದ್ಧ ದಾಖಲಾಗುವ ದೂರುಗಳನ್ನು 3 ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಕ್ಕೆ (ಡೇರಾ) ನಿರ್ದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ ಎಂದು

    ಹೈಕೋರ್ಟ್​ಗೆ ಸರ್ಕಾರ ಮಾಹಿತಿ ನೀಡಿದೆ. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಕೀಲ ಎನ್.ಪಿ. ಅಮೃತೇಶ್, 3 ತಿಂಗಳಲ್ಲಿ ದೂರು ಇತ್ಯರ್ಥಪಡಿಸಲು ಆದೇಶಿಸಲಾಗಿದೆ. ಆದರೆ, ಕಾಲಮಿತಿಯಲ್ಲಿ ದೂರು ಇತ್ಯರ್ಥಪಡಿಸದವರ ವಿರುದ್ಧ ಯಾವ ಕ್ರಮ ಜರುಗಿಸಲಾಗುತ್ತದೆ ಎಂಬ ಬಗ್ಗೆ ಹೇಳಲಾಗಿಲ್ಲ. ಆದ್ದರಿಂದ, ಆ ಕುರಿತ ನಿಯಮ ರೂಪಿಸಿ ಕರ್ನಾಟಕ ಶಿಕ್ಷಣ ಸಂಸ್ಥೆಗಳ ನಿಯಮಗಳು- 1995ರ ಸೆಕ್ಷನ್ 15ರಲ್ಲಿ ಸೇರಿಸಲು ನಿರ್ದೇಶಿಸಬೇಕು ಎಂದು ಕೋರಿದರು. ಆ ಬಗ್ಗೆ ಗಮನಹರಿಸಿ ನಿರ್ಧಾರ ತಿಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದ ಪೀಠ, ವಿಚಾರಣೆ ಮುಂದೂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts