More

    ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕುವ ಕಾಂಗ್ರೆಸ್​ ಪ್ರಯತ್ನ ವಿಫಲಗೊಳಿಸಿದ ಪೊಲೀಸರು

    ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್​​ಡಿಎಲ್) ಟೆಂಡರ್​ಗೆ ಸಂಬಂಧಿಸಿದ ಲಂಚದ ಪ್ರಕರಣದಲ್ಲಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಪ್ರಶಾಂತ್ ಮಾಡಾಳ್ ಬಂಧಿತವಾಗಿದ್ದರೆ, ಶಾಸಕರು ನಾಪತ್ತೆಯಾಗಿದ್ದಾರೆ. ಬಿಜೆಪಿ ಶಾಸಕನ ವಿರುದ್ಧ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ, ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್​ ಮುಂದಾಗಿತ್ತು. ಆದರೆ, ಕಾಂಗ್ರೆಸ್​ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

    ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್​ ನಿರ್ಧರಿಸಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹಾಗೂ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸುರ್ಜೇವಾಲ, ಮಾಜಿ ಸಚಿವ ದಿನೇಶ್​ ಗುಂಡೂರಾವ್​ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರು ಕಾರ್ಯಕರ್ತರೊಂದಿಗೆ ಸಿಎಂ ಬೊಮ್ಮಾಯಿ ನಿವಾಸದತ್ತ ಬಂದಿದ್ದರು. ಅವರನ್ನು ತಡೆದಿದ್ದಕ್ಕೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

    ಇದನ್ನೂ ಓದಿ: ಉಜ್ಜಯಿನಿ ಮಹಾಕಾಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ವಿರೂಷ್ಕಾ ದಂಪತಿ ಹೇಳಿದ್ದಿಷ್ಟು….

    ಕಾಂಗ್ರೆಸ್​ ಮುತ್ತಿಗೆ ಯತ್ನಿಸಲು ಆಗಮಿಸಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಾಂಗ್ರೆಸ್ ನಾಯಕರನ್ನು ನಗರ ಪೊಲೀಸರು ತಮ್ಮ ವಶಕ್ಕೆ ಪಡೆದು ಹೈಗ್ರೌಂಡ್ ಠಾಣೆಗೆ ಕರೆತರುವ ಮೂಲಕ ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕುವ ಕಾಂಗ್ರೆಸ್​ ಯತ್ನವನ್ನು ವಿಫಲಗೊಳಿಸಿದರು.

    ಮುಕೇಶ್ ಅಂಬಾನಿ ಡ್ರೈವರ್ ಸಂಬಳ ತಿಳಿದರೆ ದೊಡ್ಡ ಹುದ್ದೆಯೂ ಬೇಡ ಎನ್ನುತ್ತೀರಿ!

    ನನ್ನ ಸ್ತನಗಳನ್ನೇ ದಿಟ್ಟಿಸಿ ನೋಡುತ್ತಿದ್ದ: ಉಬರ್​ ಆಟೋ ಚಾಲಕನ ಕರಾಳ ಮುಖ ಬಿಚ್ಚಿಟ್ಟ ಪತ್ರಕರ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts