

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಭಾರತದಲ್ಲಿ 1600ಕ್ಕೂ ಹೆಚ್ಚು ಭಾಷೆಗಳು ಇವೆ. ಸ್ಥಳೀಯ ಭಾಷೆ, ಸಾಹಿತ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅದರ ಕ್ರೋಡೀಕರಣ ನಡೆಯಬೇಕು ಎಂದು ಆಯುರ್ವೇದ ವೈದ್ಯೆ, ಆಸರೆ ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ ಮಂಗಳೂರು ಹೇಳಿದರು.
ಭಾನುವಾರ ಧರ್ಮಸ್ಥಳ ಸಮೀಪದ ಸೂರ್ಯಕಮಲ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ವತಿಯಿಂದ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ತಾಲೂಕು ಮಹಿಳಾ ಘಟಕದ ಸಹಯೋಗದಲ್ಲಿ ’ಸಾಹಿತ್ಯದಲ್ಲಿ ಭಾರತೀಯ ಮಹಿಳೆ’ ಎಂಬ ವಿಷಯದಲ್ಲಿ ಜರುಗಿದ ರಾಜ್ಯ ಮಹಿಳಾ ಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಸಂಶೋಧಕಿ ಡಾ.ಪ್ರಮೀಳಾ ರಾವ್ ಮಾತನಾಡಿ, ಉತ್ತಮ ಅಂಶಗಳನ್ನು ಮೈಗೂಡಿಸಿ ಸಾಹಿತ್ಯ ರಚಿಸುವ ಜಾಣ್ಮೆ ಮೈಗೂಡಿಸಿಕೊಳ್ಳಬೇಕು. ಸಾಹಿತ್ಯದಿಂದ ಸಮಾಜವನ್ನು ತಿದ್ದುವ ಕೆಲಸವಾಗಬೇಕು ಎಂದರು.
ಅಭಾಸಾಪ ಮಹಿಳಾ ಪ್ರಮುಖ್ ವಿನುತಾ ಕೆ.ಆರ್.ಮಾತನಾಡಿ ಭಾರತೀಯ ಸಾಹಿತ್ಯ ವಿಶ್ವದಾದ್ಯಂತ ಪಸರಿಸಿದೆ. ವೇದಗಳ ಕಾಲದಿಂದಲೂ ಮಹಿಳೆಯರು ಸಾಹಿತ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಸ್ವಾಗತ ಸಮಿತಿ ಅಧ್ಯಕ್ಷೆ ಸೋನಿಯಾ ವರ್ಮಾ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ದಿವ್ಯಾ ಹೆಗಡೆ ಕಬ್ಬಿನಗದ್ದೆ ನಿರೂಪಿಸಿದರು. ಸ್ವಾಗತ ಸಮಿತಿ ಕಾರ್ಯದರ್ಶಿ ವಿದ್ಯಾಶ್ರೀ ಅಡೂರು ಹಾಗೂ ಪದಾಧಿಕಾರಿಗಳು ಸಹಕರಿಸಿದರು. ಚಂದ್ರಕಲಾ ಕುಮಾರ್ ಮೈಸೂರು ನಿರೂಪಿಸಿದರು.
ಕವಯತ್ರಿ ಸಮ್ಮಿಲನ
ಸಾಹಿತಿ ಶೈಲಜಾ ಗೋರನಮನೆ ಶಿರಸಿ ಅವರ ಅವಲೋಕನದಲ್ಲಿ ನಡೆದ ಕವಯತ್ರಿ ಸಮ್ಮಿಲನದಲ್ಲಿ ಅರ್ಚನಾ ಹೆಬ್ಬಾರ್ ಬೆಂಗಳೂರು, ಶೀಲಾ ಅರಕಲಗೂಡು, ಮೇಧಾ ಪ್ರಹ್ಲಾದಾಚಾರ್ಯ, ಜಯಂತಿ ಎಂ.ಎನ್., ಗುಣವತಿ ಕೆ.ಪಿ., ಪ್ರೇಮಾ ಆರ್.ಶೆಟ್ಟಿ, ವಿನುತಾ ಗೌಡ, ಆಶಾ ಅಡೂರು, ಉಮಾಶಂಕರಿ ಮರಿಕೆ, ವಿಮಲಾರುಣ ಪಡ್ಡಂಬೈಲು, ಸುಜಾತಾ ಆರ್.ರಾವ್, ವಿಜಯಲಕ್ಷ್ಮೀ ಚೆಕ್ಕೆ, ನಂದಾ ಪ್ರೇಮ ಕುಮಾರ್, ಮಂಜುಳಾ ಪ್ರಸಾದ್, ವೀಣಾ ಕೃಷ್ಣಮೂರ್ತಿ, ವೀಣಾ ಬರಗಿ, ಮಂಗಳಾ ಭಾಗ್ವತ್, ಮಹಾದೇವಿ ಗೌಡ, ದಾಕ್ಷಾಯಿಣಿ ವಿಜಯಪುರ ಮೊದಲಾದ ಕವಾಯತ್ರಿಯರು ಸ್ವ-ರಚಿತ ಕವನಗಳನ್ನು ವಾಚಿಸಿದರು.