More

    ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ; 25 ಕೋಟಿ ರೂ. ಅನುದಾನ ಮಂಜೂರು: ನಯನಾ ಮೋಟಮ್ಮ

    ಚಿಕ್ಕಮಗಳೂರು: ಅತಿ ಹೆಚ್ಚು ಗ್ರಾಮೀಣ ಪ್ರದೇಶವಾಗಿರುವ ಮೂಡಿಗೆರೆ ವಿಧಾನಸಭೆ ಕ್ಷೇತ್ರಕ್ಕೆ ಪ್ರಮುಖವಾಗಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

    ಕೆ.ಆರ್.ಪೇಟೆ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮೂಲಕ ಬಿಗ್ಗನಹಳ್ಳಿ, ಬೂದನಿಕೆ, ಬಾಣಾವರ ಹಾಗೂ ಕದ್ರಿಮಿದ್ರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಒಂದು ಕೋಟಿ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ಒದಗಿಸಿದೆ. ಇದರಲ್ಲಿ 17 ಕೋಟಿ ರೂ. ಅನುದಾನವನ್ನು ಪ್ರತಿ ಹೋಬಳಿಗೂ ಸಮಾನವಾಗಿ ಹಂಚಿಕೆ ಮಾಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ ಎಂದರು.
    ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಯಾವುದೇ ಸಂದರ್ಭದಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ. ಹೀಗಾಗಿ ಪ್ರತಿ ಹೋಬಳಿಗೂ ಹೋಗಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಜತೆಗೆ ಮಳೆಗಾಲ ಆರಂಭದೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
    ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಈಗಾಗಲೇ 17 ಕೋಟಿ ರೂ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ, 1.50 ಕೋಟಿ ಪಿಡಬ್ಲ್ಯೂಡಿ, 3 ಕೋಟಿ ರೂ. ದೇವಾಲಯ ಅಭಿವೃದ್ಧಿ ಹಾಗೂ 3.50 ಕೋಟಿ ಸಮುದಾಯ ಭವನ ನಿರ್ಮಾಣ ಸೇರಿ ಒಟ್ಟು 25 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.
    ಕಾಂಗ್ರೆಸ್ ಅಂಬಳೆ ಹೋಬಳಿ ಅಧ್ಯಕ್ಷ ಬಿ.ಬಿ.ಸೋಮೇಗೌಡ, ಕೆ.ಆರ್.ಪೇಟೆ ಗ್ರಾಪಂ ಅಧ್ಯಕ್ಷೆ ಗೀತಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಾಪೀರ್, ಹೋಬಳಿ ಅಧ್ಯಕ್ಷ ವಿಜಯ್‌ಕುಮಾರ್, ಗ್ರಾಮಸ್ಥರಾದ ದೇವರಾಜ್, ಪ್ರಕಾಶ್, ಕುಮಾರಶೆಟ್ಟಿ, ಬಲರಾಮ್‌ಶೆಟ್ಟಿ, ಹರೀ ಶ್, ಅರೇಹಳ್ಳಿ ಪ್ರಕಾಶ್, ಈರಯ್ಯ ಮತ್ತಿತರರಿದ್ದರು.

    ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಕಷ್ಟು ಜಾಗ ಕಾಯ್ದಿರಿಸಲಾಗಿದೆ. ಗುರುತಿಸಿದ ಕೆಲವು ಜಾಗವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗಿದ್ದು, ಲೋಕಸಭೆ ಚುನಾವಣೆ ಬಳಿಕ ಹಕ್ಕುಪತ್ರ ವಿತರಿಸುವ ಸಂಬಂಧ ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಪಂ ಮೂಲಕ ಕ್ರಮಕೈಗೊಳ್ಳಲಾಗುವುದು.
    ನಯನಾ ಮೋಟಮ್ಮ, ಶಾಸಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts