More

    ಹೆಚ್ಚಿನ ದರಕ್ಕೆ ಮಾಸ್ಕ್, ಸ್ಯಾನಿಟೈಸರ್ ಮಾರಿದರೆ ಕಠಿಣ ಕ್ರಮ, ಬಳ್ಳಾರಿ ಡಿಸಿ ನಕುಲ್ ಎಚ್ಚರಿಕೆ

    ಬಳ್ಳಾರಿ: ಕರೊನಾ ಹಿನ್ನೆಲೆಯಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳಿಗೆ ಬೇಡಿಕೆಯಿದೆ ಎಂದು ಸರ್ಕಾರ ಸೂಕ್ತ ಬೆಲೆ ನಿಗದಿಪಡಿಸಿದ್ದು, ಅದರಂತೆ ಮಾರಾಟ ಮಾಡಬೇಕು. ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಎಚ್ಚರಿಕೆ ನೀಡಿದ್ದಾರೆ.

    ಡಿಸಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಸ್ಕ್ ಮತ್ತು ಸ್ಯಾನಿಟೈಸರ್ ಸರಬರಾಜು, ದಾಸ್ತಾನು ಮತ್ತು ಬೆಲೆ ಹಾಗೂ ಪೂರೈಕೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗುಣಮಟ್ಟದ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ಜಿಲ್ಲೆಗೆ ಪೂರೈಸುವ ನಿಟ್ಟಿನಲ್ಲಿ ವಿತರಕರು ಜವಾಬ್ದಾರಿ ವಹಿಸಿಕೊಳ್ಳಬೇಕು. ಸರ್ಕಾರದ ಆದೇಶದಂತೆ ಟ್ರಿಪಲ್ ಲೇಯರ್ ಮಾಸ್ಕ್‌ಗಳನ್ನು 10 ರೂ ಹಾಗೂ 200 ಮೀ.ಲಿ ಸ್ಯಾನಿಟೈಸರ್‌ಗೆ 100 ರೂ. ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

    ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ರಾಮೇಶ್ವರಪ್ಪ, ಉಪ-ಔಷಧ ನಿಯಂತ್ರಕ ರೇವಣಸಿದ್ದಪ್ಪ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಮರಿಯಾಂಬಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು, ವಿತರಕರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts